Thursday, February 13, 2025
Homeಜಿಲ್ಲಾ ಸುದ್ದಿಗಳು | District Newsಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಸಾವು

ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಸಾವು

ಚಳ್ಳಕರೆ,ಏ.26-ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ.

ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ವೇಳೆ ರಕ್ತದೊತ್ತಡದಲ್ಲಿ ಏರುಪೇರಾಗಿ ಯಶೋಧ (55) ಎಂಬುವವರು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಳ್ಳಕರೆ ನಗರದ ವಿಠಲನಗರ ನಿವಾಸಿಯಾದ ಯಶೋಧ ಅವರು ತಾಲೂಕು ಪಂಚಾಯ್ತಿ ನೌಕರರೆಂದು ತಿಳಿದುಬಂದಿದೆ. ಘಟನೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News