ಬೆಂಗಳೂರು,ಜು.27- ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತು
ಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ.
ಬೆಂಗಳೂರು ಹೊರತುಪಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಸಗೊಬ್ಬರವನ್ನು ಪೂರೈಕೆ ಮಾಡದೆ ಅಭಾವ ಸೃಷ್ಟಿಸಿರುವ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ. ಬಿಜೆಪಿಯ ರೈತ ಮೋರ್ಚಾದಿಂದ ಎರಡು ಹಂತಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡುತ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ. ಇವರಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಕಾಳಜಿಯೂ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡುತ್ತಿದ್ದರು. ಅದಕ್ಕೆ ಅನುದಾನವೂ ಕೊಟ್ಟಿದ್ದರು. ಆದರೆ ಈ ಸರ್ಕಾರ ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ಇದ್ದ ದಾಸ್ತಾನು ಅನುದಾನವನ್ನು 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಂಗಾರು ಶೀಘ್ರ ಆರಂಭವಾಗಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಮುಂಚೆಯೇ ಮುಂಚೆಯೇ ಎಚ್ಚೆತ್ತುಕೊಂಡು ಕೇಂದ್ರಕ್ಕೆ ಪತ್ರ ಬರೆಯಬೇಕಿತ್ತು. ಈಗ ಪತ್ರ ಬರೆಯುವುದಲ್ಲ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಕಿಸಾನ್ ಸಮಾನ್ ಯೋಜನೆ ನಿಲ್ಲಿಸಿದೆ. ಕೇಂದ್ರದ ರೈತ ವಿಧ್ಯಾನಿಧಿಯನ್ನು ಸ್ಥಗಿತಗೊಳಿಸಿದೆ. ಕೃಷಿ ಪಂಪಸೆಟ್ ಸಬ್ಸಿಡಿಯನ್ನ ಇಳಿಸಿದೆ. ರೈತರಿಗೆ ಸಹಕಾರ ಕೊಡದೇ ಸರ್ಕಾರ ಕೈಚೆಲ್ಲಿ ಕೂತಿದೆ. ಕೇಂದ್ರದಿಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ. ಅದು ಏನಾಯಿತು ಎಂದು ವಿಜಯೇಂದ್ರ ಪ್ರಶ್ನೆ ಮಾಡಿದರು.
- ಬೆಂಗಳೂರು : ಟೆಕ್ಕಿ ಮನೆಯಲ್ಲಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
- ಕುಡುಕ ಗಂಡನ ಕಾಟ ಮತ್ತು ಬಡತನಕ್ಕೆ ಬೇಸತ್ತು ಮೂವರು ಹೆಣ್ಣು ಮಕ್ಕಳಿಗೆ ವಿಷವಿಟ್ಟು ಕೊಂದ ತಾಯಿ
- SHOCKING : ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಕೋಟ್ಯಂತರ ರೂ. ಬೆಲೆಯ ಮಾದಕ ವಸ್ತು ವಶ
- ಅಮೆರಿಕದಲ್ಲಿ 11 ಮಂದಿಗೆ ಇರಿದ ಯುವಕ, 6 ಜನರ ಸ್ಥಿತಿ ಗಂಭೀರ
- ರಾಜ್ಯದಲ್ಲಿ ಗೊಬ್ಬರ ಅಭಾವ : ನಾಳೆಯಿಂದ ಬಿಜೆಪಿ ಹೋರಾಟ