ಬೆಂಗಳೂರು,ನ.26- ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಣಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಭ್ರೂಣ ಹತ್ಯೆ ಆರೋಪದ ಹಿನ್ನಲೆಯಲ್ಲಿ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಮೇಲಿನಂತೆ ಪ್ರತಿಕ್ರಿಯಿಸಿದರು. ಮೈಸೂರಿನ ವೈದ್ಯರೊಬ್ಬರನ್ನು ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಲಿಂಗ ಪತ್ತೆ ಆರೋಪದ ಮೇಲೆ ಪೆಪೊಲೀಸರು ಬಂಧಿಸಿದ್ದಾರೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ಅವಧಿಯಲ್ಲಿ ಸಿದ್ಧಪಡಿಸಲಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಲು ಅವರು ಇದೇ ಸಂದರ್ಭದಲ್ಲಿ ನಿರಾಕರಿಸಿದರು.
ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ
ಒಂದು ಗುಂಪು ಮುಖ್ಯಮಂತ್ರಿಯವರನ್ನು ಪದಚ್ಯುತಗೊಳಿಸಲು ಹೊರಟಿದೆ ಎಂಬ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪಾಪ ಈಗ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿಪಕ್ಷ ನಾಯಕರಾದ ಮೇಲೆ ಏನೇನು ಮಾತನಾಡುತ್ತಾರೋ ಮಾತನಾಡಲಿ ಎಂದಷ್ಟೇ ಹೇಳಿದರು.