ಬೆಂಗಳೂರು,ಆ.25- ಪಾರ್ಟಿ ವೇಳೆ ಸ್ನೇಹಿತರ ನಡುವೆಯೇ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಅಮಿತ್ (25) ಕೊಲೆಯಾದ ಯುವಕ. ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿ ಎಸ್‌ವಿ ಕಾಂಕ್ರೇಟ್ ಪ್ಲ್ಯಾಂಟ್ ಇದೆ. ಈ ಕಾರ್ಖಾನೆಯಲ್ಲಿ ಕೆಲಸ ಮಾಡುವ ತನ್ನ ಊರಿನವನೇ ಆದ ಸ್ನೇಹಿತ ರವಿ ಎಂಬಾತನನ್ನು ಮಾತನಾಡಿಸುವ ಸಲುವಾಗಿ ಅಮಿತ್ ಅಲ್ಲಿಗೆ ಹೋಗಿದ್ದಾನೆ.
ರಾತ್ರಿ 7.30ರ ಸುಮಾರಿನಲ್ಲಿ ಅಮಿತ್ ಇತರೆ ಇಬ್ಬರು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನೆ. ಆ ಸಂದರ್ಭದಲ್ಲಿ ಕುಡಿದ ಅಮಲಿನಲ್ಲಿ ಅವರುಗಳ ಮಧ್ಯೆಯೇ ಯಾವುದೋ ವಿಚಾರವಾಗಿ ಜಗಳವಾಗಿದೆ.
ಗಲಾಟೆ ವೇಳೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದಾಗ ಕೈಗೆ ಸಿಕ್ಕಿದ ಗಾಜಿನ ಚೂರಿನಿಂದ ಅಮಿತ್ ಕೈ ಹಾಗೂ ಇನ್ನಿತರ ದೇಹದ ಭಾಗಗಳಿಗೆ ಮನ ಬಂದಂತೆ ಕೊಯ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಆತ ಮೃತಪಟ್ಟಿದ್ದಾನೆ.
ಸುದ್ದಿ ತಿಳಿದು ಕುಂಬಳಗೋಡು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಅಮಿತ್ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಮಿತ್ ಕೊಲೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ.ತನಿಖೆ ಮುಂದುವರೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
- ಬೆಂಗಳೂರಲ್ಲಿ ಅನಧಿಕೃತ ಪಾರ್ಕಿಂಗ್ ಮಾಡಿದ 12 ಸಾವಿರ ವಾಹನ ಸವಾರರ ವಿರುದ್ಧ ಎಫ್ಐಆರ್
- ಶೇ.50 ರಷ್ಟು ರಿಯಾಯಿತಿ ಹಿನ್ನೆಲೆಯಲ್ಲಿ ಮುಗಿಬಿದ್ದು ದಂಡ ಕಟ್ಟಿದ ವಾಹನ ಸವಾರರು
- ಶಾಂತಿಯುತ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸೂಕ್ತ ಭದ್ರತೆ : ಆಯುಕ್ತರು
- ಸೆ.1ರಿಂದ ಬಿಜೆಪಿ ‘ಧರ್ಮಸ್ಥಳ ಚಲೋ’
- ಯೂಟ್ಯೂಬರ್ ಸಮೀರ್ ಲ್ಯಾಪ್ಟಾಪ್, ಮೊಬೈಲ್ ಜಪ್ತಿ ಸಾಧ್ಯತೆ