ಬೆಂಗಳೂರು, ಸೆ.24- ಕಾಂಗ್ರೆಸ್‍ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿವಾದ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ರಾಜಣ್ಣ ಅವರ ವಿರುದ್ಧ ಡಿ.ಕೆ.ಶಿವಕುಮಾರ್ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ದಾವಣಗೆರೆಯ ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅವರು ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಮುದಾಯವಾರು ಆದ್ಯತೆ ನೀಡಬೇಕು ಎಂದಾದರೆ ಉಪಮುಖ್ಯಮಂತ್ರಿಗಳನ್ನು ಹೇಳಬೇಕು ಎಂದಾದರೆ ನೂರಾರು ಮಂದಿಯನ್ನು ಉಪಮುಖ್ಯಮಂತ್ರಿಗಳನ್ನು ಮಾಡಬೇಕಾಗುತ್ತದೆ. ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರ ಪಕ್ಷ ನಿಷ್ಠತೆ, ಬದ್ಧತೆ ಸಂಘಟನಾತ್ಮಕ ಶಕ್ತಿಯನ್ನು ಪರಿಗಣಿಸಿ ಉಪಮುಖ್ಯಮಂತ್ರಿ ಮಾಡಲಾಗಿದೆ.
ಈಗ ರಾಜಣ್ಣ ಅವರು ವಾಲ್ಮೀಕಿ ಸಮುದಾಯದವರು ಹೆಚ್ಚಿದ್ದಾರೆ ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಹುದ್ದೆ ಕೇಳುತ್ತಿದ್ದಾರೆ. ಹಾಗೆ ನೋಡಿದರೆ ರಾಜ್ಯದಲ್ಲಿ ಲಿಂಗಾಯಿತ ಸಮುದಾಯದವರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ನಮಗೆ ಮುಖ್ಯಮಂತ್ರಿ ಹುದ್ದೆಯೇ ನೀಡಬಾಕಾಗುತ್ತದೆ ಎಂದು ಪ್ರತಿಪಾದಿಸಿದರು.
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟು ಆಕ್ರೋಶ
ಜಾತಿವಾರು ಉಪಮುಖ್ಯಮಂತ್ರಿ ಹುದ್ದೆ ಹಂಚಿಕೆ ಸರಿಯಲ್ಲ. ರಾಜಣ್ಣ ಅವರ ಹೇಳಿಕೆ ಅನಗತ್ಯ. ಹಿರಿಯರೂ, ಸಚಿವರೂ ಆಗಿರುವ ರಾಜಣ್ಣ ಈ ರೀತಿಯ ಗೊಂದಲದ ಹೇಳಿಕೆ ನೀಡಬಾರದಿತ್ತು ಎಂದು ಅಸಮಾಧಾನ ಹೊರಹಾಕಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾತಿವಾರು ಆದ್ಯತೆ ನೀಡುವ ಸಲುವಾಗಿ ಪರಿಶಿಷ್ಟ ಜಾತಿ, ಮುಸ್ಲಿಂ ಮತ್ತು ಲಿಂಗಾಯಿತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದರು.
ಅದರ ಬೆನ್ನಲ್ಲೇ ಸಚಿವರಾದ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಶರಣಗೌಡ ದರ್ಶನಾಪುರ್, ಶಾಸಕರಾದ ಬಸವರಾಜರಾಯರೆಡ್ಡಿ ಮತ್ತಿತರರು ರಾಜಣ್ಣ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.ಬಸವರಾಜರಾಯರೆಡ್ಡಿ ಒಂದು ಹೆಜ್ಜೆ ಮುಂದೆ ಹೋಗಿ ಜಾತಿವಾರು ಪ್ರಾದೇಶಿಕವಾರು ಅವಕಾಶಗಳನ್ನು ನೀಡುತ್ತಿರುವುದು 3 ಬದಲು 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಸಲಹೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಾಬಲ್ಯ ಕುಗ್ಗಿಸಲು ಈ ರೀತಿಯ ಚರ್ಚೆ ಹುಟ್ಟುಹಾಕಲಾಗಿದೆ ಎಂಬ ಆಕ್ಷೇಪಗಳಿವೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮ ವಿರುದ್ಧ ತೆರೆಮರೆಯಲ್ಲಿ ಮಸಲತ್ತು ನಡೆಸುತ್ತಿರುವವರಿಗೆ ಟಾಂಗ್ ನೀಡಲು ತಮ್ಮದೇ ಆದ ಕಾರ್ಯಸೂಚಿಯನ್ನು ರೂಪಿಸುತ್ತಿದ್ದಾರೆ ಎಂದು ಹೇಳಲಾಗಿದೆ.