ಕೊನೆಗೂ ನಾಮಪತ್ರ ಹಿಂಪಡೆಯಲು ದಿಂಗಾಲೇಶ್ವರ ಸ್ವಾಮೀಜಿ ಸಮ್ಮತಿ

ಬೆಂಗಳೂರು,ಏ.22- ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ಕೊನೆಗೂ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ. ಹಿರಿಯ ಮಠಾಧೀಶರೊಬ್ಬರ ಮನವೊಲಿಕೆ ಹಾಗೂ ರಾಜ್ಯದ ಪ್ರಭಾವಿ ಹಿರಿಯ ಲಿಂಗಾಯತ ಸಮುದಾಯದ ನಾಯಕರ ಮಧ್ಯಪ್ರವೇಶದಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ಮುಂದಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಸಮುದಾಯದವರ ಮಾತಿಗೆ ಕಟಿಬಿದ್ದು ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆಯುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಸಮುದಾಯದ ಜೊತೆಗೆ ಭಕ್ತರ … Continue reading ಕೊನೆಗೂ ನಾಮಪತ್ರ ಹಿಂಪಡೆಯಲು ದಿಂಗಾಲೇಶ್ವರ ಸ್ವಾಮೀಜಿ ಸಮ್ಮತಿ