Saturday, August 30, 2025
Homeರಾಜ್ಯಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌

ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌

FIR against former minister Renukacharya

ಬೆಂಗಳೂರು,ಆ.30- ಗಣೇಶ ಉತ್ಸವದ ಸಂದರ್ಭದಲ್ಲಿ ಡಿಜೆ ಅನುಮತಿಗಾಗಿ ರಸ್ತೆತಡೆ ನಡೆಸಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಆಗಸ್ಟ್‌ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ಅವರು ರಸ್ತೆ ತಡೆ ನಡೆಸಿ ಧರಣಿ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ, ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಾವಣಗೆರೆ ಬಡಾವಣೆ ಪೊಲೀಸ್‌‍ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದಾವಣಗೆರೆ ಡಿಸಿ ಡಾ.ಗಂಗಾಧರ ಸ್ವಾಮಿ ಅವರು ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ಇಲ್ಲ ಎಂದಿದ್ದರು. ದಾವಣಗೆರೆ ಗಣೇಶ ಉತ್ಸವ ಸಮಿತಿ ಪದಾಧಿಕಾರಿಗಳು, ಡಿಜೆ ಮಾಲೀಕರು ಡಿಜೆಗೆ ಅನುಮತಿ ಕೇಳಿದ್ದರು. ಆದರೆ ಜಿಲ್ಲಾಧಿಕಾರಿಯವರ ಡಿಜೆಗೆ ಮನವಿ ಕೊಡುವುದಿಲ್ಲ ಎಂದು ಸ್ಪಷ್ಟನೆ ಪಡಿಸಿದ್ದರು.

ಡಿಜೆ ಮಾಲೀಕರು, ಗಣೇಶ ಆಯೋಜಕರು ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ಸೇರಿ, ಡಿಜೆಗೆ ಅವಕಾಶ ಕೊಡುವಂತೆ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಡಿಜೆಗೆ ಅವಕಾಶ ಕೊಡುವಂತೆ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಮನವಿ ಮಾಡಿ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದ್ದರು.ಈ ವೇಳೆ ಜಿಲ್ಲಾಡಳಿತ ಸ್ಪಂದಿಸದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಪ್ರತಿಭಟನಾನಿರತರು ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ರಸ್ತೆತಡೆ ನಡೆಸಲು ಮುಂದಾಗಿದ್ದರು.

ಜಿಲ್ಲಾಡಳಿತ ಜಗ್ಗದೇ ಇದ್ದಾಗ ಅವಕಾಶ ಕೊಡದೇ ಇದ್ದರೂ ನಾವು ಡಿಜೆ ಬಳಸುತ್ತೇವೆ, ಏನ್‌ ಮಾಡ್ತೀರಾ, ಮಾಡಿ ಎಂದು ರೇಣುಕಾಚಾರ್ಯ ಜಿಲ್ಲಾಡಳಿತಕ್ಕೆ ಸವಾಲು ಹಾಕಿದ್ದರು. ಸರ್ಕಾರದ ಮಟ್ಟದಲ್ಲೇ ಡಿಜೆ ನಿಷೇಧಿಸಿದ್ದು, ಬಿಜೆಪಿ ನಾಯಕರು ಆಡಳಿತ ಪಕ್ಷದ ಮೇಲೆ ಮುಗಿಬಿದ್ದಿದ್ದಾರೆ. ಡಿಜೆಗೆ ಅವಕಾಶ ಕೊಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಅಲ್ಲದೇ ಹಗಲು ವೇಳೆ ಜನವಸತಿ ಪ್ರದೇಶದಲ್ಲಿ 55 ಡೆಸಿಬಲ್‌ ಮತ್ತು ರಾತ್ರಿ ವೇಳೆ 45 ಡೆಸಿಬಲ್‌ ಶಬ್ದ ಮಟ್ಟಕ್ಕೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

RELATED ARTICLES

Latest News