Friday, August 22, 2025
Homeರಾಜ್ಯಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ FIR

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ FIR

FIR against Girish Mattannavar

ಬೆಂಗಳೂರು,ಆ.22- ಮಹೇಶ್‌ಶೆಟ್ಟಿ ತಿಮರೋಡಿಯವರನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ಇಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾದರು.

ಬಿ.ಎಲ್‌ ಸಂತೋಷ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಪ್ರಕರಣದಲ್ಲಿ ಮಹೇಶ್‌ಶೆಟ್ಟಿಯವರನ್ನು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಅವರ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಹೋದಾಗ ಗಿರೀಶ್‌ ಮಟ್ಟಣ್ಣನವರ್‌ ಸೇರಿದಂತೆ 25 ಕ್ಕೂ ಹೆಚ್ಚು ಮಂದಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.

ಹಾಗಾಗಿ ಗಿರೀಶ್‌ ಮಟ್ಟಣ್ಣನವರ್‌, ಜಯಂತ್‌ ಸೇರಿದಂತೆ 30 ಮಂದಿ ವಿರುದ್ಧ ಬ್ರಹ್ಮಾವರ ಠಾಣೆ ಸಬ್‌ ಇನ್‌್ಸಪೆಕ್ಟರ್‌ ಅಶೋಕ್‌ ಅವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.ಎ್‌‍ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್‌ ಮಟ್ಟಣ್ಣನವರ್‌ಗೆ ಸೂಚಿಸಿದ್ದರ ಹಿನ್ನೆಲೆಯಲ್ಲಿ ಇಂದು ಅವರು ವಿಚಾರಣೆಗೆ ಹಾಜರಾದರು.

RELATED ARTICLES

Latest News