Wednesday, June 4, 2025
Homeರಾಜ್ಯಕಲ್ಲಡ್ಕ ಪ್ರಭಾಕ‌ರ್ ವಿರುದ್ಧ ಎಫ್‌ಐಆ‌ರ್

ಕಲ್ಲಡ್ಕ ಪ್ರಭಾಕ‌ರ್ ವಿರುದ್ಧ ಎಫ್‌ಐಆ‌ರ್

FIR against Kalladka Prabhakar

ಮಂಗಳೂರು, ಜೂ.2- ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 353(2) ಅಡಿಯಲ್ಲಿ ಕೇಸ್ ದಾಖಲಾಗಿದೆ. ಭಟ್ ಅವರು ಮೇ 12 ರಂದು ಬಂಟ್ವಾಳದ ಕಾವಳಪಡೂರು ಮಧ್ವ ಪ್ಯಾಲೇಸ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

RELATED ARTICLES

Latest News