Friday, April 4, 2025
Homeಬೆಂಗಳೂರುವೀಲಿಂಗ್ ಮಾಡಿದ ಅಪ್ರಾಪ್ತ, ಪೋಷಕರ ವಿರುದ್ಧ ಎಫ್‌ಐಆರ್

ವೀಲಿಂಗ್ ಮಾಡಿದ ಅಪ್ರಾಪ್ತ, ಪೋಷಕರ ವಿರುದ್ಧ ಎಫ್‌ಐಆರ್

ಬೆಂಗಳೂರು, ಜು.31- ವೀಲಿಂಗ್ ಮಾಡುವವರನ್ನು ಪತ್ತೆ ಹಚ್ಚಲು ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಕೆಜಿ ಹಳ್ಳಿ ಸಂಚಾರಿ ಠಾಣೆ ಪೊಲೀಸರು ದ್ವಿಚಕ್ರ ವಾಹನ ಸಮೇತ ಅಪ್ರಾಪ್ತ ಸವಾರನನ್ನು ವಶಕ್ಕೆ ಪಡೆದು ಆತನ ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಶ್ರೀಸಾಯಿ ಆಸ್ಪತ್ರೆ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ಮಾರ್ಗವಾಗಿ ಈ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನದಲ್ಲಿ ವೀಲಿಂಗ್‌ ಮಾಡುತ್ತಾ ಬರುತ್ತಿದ್ದಾಗ ಪೊಲೀಸರು ವಾಹನದ ಸಮೇತ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ದ್ವಿಚಕ್ರ ವಾಹನ ಸವಾರ ಅಪ್ರಾಪ್ತನಾಗಿದ್ದು, ಆತನ ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News