ನವದೆಹಲಿ,ಏ.18 ಇತ್ತಿಚೆಗೆ ಬಿಡುಗಡೆಯಾದ ಜಾಟ್ ಚಿತ್ರದ ಹೀರೋ ಸನ್ನಿ ಡಿಯೋಲ್ ಹಾಗೂ ರಣದೀಪ್ ಹೂಡಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿತ್ರದಲ್ಲಿ ಒಂದು ದೃಶ್ಯವು ಇಡೀ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಭಾವನೆಗಳನ್ನು ತೀವ್ರವಾಗಿ ನೋಯಿಸಿದೆ ಎಂದು ನೀಡಿರುವ ದೂರಿನ ಹಿನ್ನೆಲೆಯಲ್ಲಿ ನಟರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಿವುಡ್ ನಟರಾದ ಸನ್ನಿ ಡಿಯೋಲ್, ರಣದೀಪ್ ಹೂಡಾ ಮತ್ತು ವಿನೀತ್ ಕುಮಾರ್ ಸಿಂಗ್ ವಿರುದ್ದ ಇತ್ತೀಚೆಗೆ ಬಿಡುಗಡೆಯಾದ ಜಾಟ್ ಚಿತ್ರದ ದೃಶ್ಯದಿಂದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 299 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಜಲಂಧರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಚಿತ್ರದ ನಿರ್ದೇಶಕ ಗೋಪಿಚಂದ್ ಮಾಲಿನೇನಿ ಮತ್ತು ಅದರ ನಿರ್ಮಾಪಕರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಏಪ್ರಿಲ್ 10 ರಂದು ಬಿಡುಗಡೆಯಾದ ಚಿತ್ರದ ಒಂದು ದೃಶ್ಯವು ಇಡೀ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಭಾವನೆಗಳನ್ನು ತೀವ್ರವಾಗಿ ನೋಯಿಸಿದೆ ಎಂದು ದೂರು ನೀಡಲಾಗಿತ್ತು.