Sunday, October 6, 2024
Homeರಾಜ್ಯಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..?

ಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..?

FIR against the CM as instructed by the court..?

ಬೆಂಗಳೂರು,ಸೆ.27– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಸಿಆರ್ಪಿಸಿ ಸೆಕ್ಷನ್ ಅಡಿಯೇ ಇಂದು ಎಫ್ಐಆರ್ ದಾಖಲಾಗಲಿದೆ. ಸಿಆರ್ಪಿಸಿ ಸೆಕ್ಷನ್ 156(3)ರಡಿಯೇ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಎಸ್ಪಿ ಇಂದು ಸಂಜೆಯೊಳಗೆ ಎಫ್ಐಆರ್ ದಾಖಲಿಸಲಿದ್ದಾರೆ.

ಯಾವ ಕಾಯ್ದೆಯಡಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದೂರು ದಾಖಲಿಸಬೇಕೆಂದು ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಲೋಕಾಯುಕ್ತ ಎಡಿಜಿಪಿ ಮೌನೀಶ್ ಕರ್ಬಿಕರ್ ಅವರಿಗೆ ಪತ್ರ ಬರೆದು ಸಲಹೆ ಕೇಳಿದ್ದರು.ಈ ನಡುವೆ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಸಹ ಕೇಳಿದ್ದರು.

ಈ ಪತ್ರಕ್ಕೆ ಉತ್ತರಿಸಿರುವ ಎಡಿಜಿಪಿ ಮೌನೀಶ್ ಕರ್ಬಿಕರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಸಿಆರ್ಪಿಸಿ ಸೆಕ್ಷನ್ 156(3) ಅಡಿಯೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹಿರಿಯ ಅಧಿಕಾರಿಗಳ ಸೂಚನೆ ಮತ್ತು ಕಾನೂನು ತಜ್ಞರ ಸಲಹೆಯಂತೆ ಮೈಸೂರು ಲೋಕಾಯುಕ್ತ ಎಸ್ಪಿ ಅವರು ಪ್ರಕರಣ ದಾಖಲಿಸಲಿದ್ದಾರೆ.

ಇದರಿಂದಾಗಿ ಕಳೆದ ಎರಡು ದಿನಗಳಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಯಾವ ಕಾಯ್ದೆಯಡಿ ದೂರು ದಾಖಲಿಸಬೇಕು ಎಂಬುದರ ಕುರಿತು ಉಂಟಾಗಿದ್ದ ಗೊಂದಲ ಬಹುತೇಕ ನಿವಾರಣೆಯಾಗಿದೆ. ಇದೀಗ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ನಿಚ್ಚಳವಾಗಿದೆ.

ಸೆಕ್ಷನ್ 120ಬಿ(ಅಪರಾಧಿಕ ಒಳಸಂಚು), 166-ಯಾವುದೇ ವಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕ ನೌಕರನು ಕಾನೂನು ಬದ್ದ ಆದೇಶ ಪಾಲಸದಿರುವುದು, 403 ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 ಅಪರಾಧಿಕ ನಂಬಿಕೆದ್ರೋಹ, 420 ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಮಾಣಿಕವಾಗಿ ಪ್ರೇರೇಪಿಸುವುದು, 42 ಕೇಡಿನ ಅಪರಾಧಕ್ಕಾಗಿ ದಂಡನೆ, 465 ಖೋಟಾ ತಯಾರಿಕೆಗೆ ದಂಡನೆ, 468 ವಂಚನೆ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 ಅಕ್ರಮ ಬಂಧನ, 351 ಹಲ್ಲೆ ಕಾನೂನಿನಡಿ ತನಿಖೆ ನಡೆಯಲಿದೆ.

ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿಯಾದರೆ ಪಾರ್ವತಿ 2ನೇ ಆರೋಪಿ, ಮಲ್ಲಿಕಾರ್ಜುನಸ್ವಾಮಿ 3ನೇ ಹಾಗೂ ದೇವರಾಜ್ 4ನೇ ಆರೋಪಿಯಾಗಲಿದ್ದಾರೆ. ನ್ಯಾಯಾಲಯವು ಆರೋಪಿಗಳ ವಿರುದ್ಧ ನಿರ್ಧಿಷ್ಟ ಸೆಕ್ಷನ್ಗಳಡಿ ದಾಖಲಿಸಿ ತನಿಖೆ ನಡೆಸಬೇಕೆಂದು ನಿರ್ದೇಶನ ನೀಡಿರುವುದರಿಂದ ಲೋಕಾಯುಕ್ತ ಪೊಲೀಸರು ಅದರ ಪ್ರಕಾರವೇ ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.

ಎಫ್ಐಆರ್ ದಾಖಲಾದ ನಂತರ ಆರೋಪಿ ಸ್ಥಾನದಲ್ಲಿ ಇರುವವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ಯಾವ ಸೆಕ್ಷನ್ನಡಿ ದೂರು ದಾಖಲಿಸಬೇಕೆಂಬ ಗೊಂದಲ ಉಂಟಾಗಿತ್ತು. ಸಿಆರ್ಪಿಸಿ ಅಡಿ ಎಫ್ಐಆರ ದಾಖಲಿಸುವ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಅಂತಿಮವಾಗಿ ಕಾನೂನು ತಜ್ಞರು ನ್ಯಾಯಾಲಯದ ಆದೇಶದಂತೆ ದೂರು ದಾಖಲಿಸಬೇಕೆಂಬ ಸಲಹೆ ಕೊಟ್ಟ ನಂತರ ಗೊಂದಲ ಬಗೆಹರಿದಿದೆ.

RELATED ARTICLES

Latest News