Thursday, May 15, 2025
Homeರಾಷ್ಟ್ರೀಯ | Nationalಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ವಿಜಯ್ ಶಾ ವಿರುದ್ಧ ಎಫ್‌ಐಆರ್

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ವಿಜಯ್ ಶಾ ವಿರುದ್ಧ ಎಫ್‌ಐಆರ್

FIR against Vijay Shah for remarks on Col Qureshi; minister issues apology

ಭೋಪಾಲ್, ಮೇ 15 (ಪಿಟಿಐ) ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ತಡರಾತ್ರಿ ಇಂದೋರ್ ಜಿಲ್ಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಮೇರೆಗೆ ಸಚಿವ ಶಾ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮನುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಹಿಟಿಕಾ ವಾಸಲ್ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ.

ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ), 196 (1) (ಬಿ) (ವಿವಿಧ ಸಮುದಾಯಗಳ ನಡುವಿನ ಪರಸ್ಪರ ಸಾಮರಸ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೃತ್ಯ, ಇದು ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡುತ್ತದೆ ಅಥವಾ ಉಂಟುಮಾಡುವ ಸಾಧ್ಯತೆ ಇದೆ) ಮತ್ತು 197 (1) (ಸಿ) (ವಿವಿಧ ಸಮುದಾಯಗಳ ನಡುವಿನ ಪರಸ್ಪರ ಸಾಮರಸ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಮುದಾಯದ ಸದಸ್ಯರ ಬಗ್ಗೆ ಮಾತನಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ ಇಂದೋರ್ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾ ಖುರೇಷಿ ಅವರ ಹೆಸರನ್ನು ಉಲ್ಲೇಖಿಸದೆ ವಿವಾದಾತ್ಮಕ. ಹೇಳಿಕೆ ನೀಡಿದ್ದರು.ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವೋಮಿಕಾ ಸಿಂಗ್ ಅವರೊಂದಿಗೆ ಪತ್ರಿಕಾಗೋಷ್ಠಿಗಳಲ್ಲಿ ಕರ್ನಲ್ ಖುರೇಷಿ ಅವರು ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ಆಪರೇಷನ್ ಸಿಂಧೂರ್ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದರು.

ತಮ್ಮ ಹೇಳಿಕೆಯಿಂದ ಭಾರಿ ವಿವಾದ ಉಂಟಾದ ನಂತರ, ಯಾರಿಗಾದರೂ ನೋವಾಗಿದ್ದರೆ, ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ದ ಎಂದು ಶಾ ಹೇಳಿದರು. ತಮ್ಮ di ಸಹೋದರಿಗಿಂತ ಹೆಚ್ಚಾಗಿ ಕರ್ನಲ್ ಖುರೇಷಿ ಅವರನ್ನು ಗೌರವಿಸುವುದಾಗಿಯೂ ಅವರು ಹೇಳಿಕೊಂಡಿದ್ದರು.

RELATED ARTICLES

Latest News