Wednesday, October 16, 2024
Homeರಾಜ್ಯನಾಲಿಗೆ ಹರಿಬಿಟ್ಟಿದ್ದ ತಂಗಡಗಿ ವಿರುದ್ಧ ಎಫ್‍ಐಆರ್ ದಾಖಲು

ನಾಲಿಗೆ ಹರಿಬಿಟ್ಟಿದ್ದ ತಂಗಡಗಿ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು,ಮಾ.27- ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರ ಹಿನ್ನಲೆಯಲ್ಲಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ.

ಬಿಜೆಪಿ ನೀಡಿದ ದೂರಿನ ಮೇರೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾಗಿರುವ ತಂಗಡಿ ವಿರುದ್ಧ ಆಯೋಗ ಎಫ್‍ಐಆರ್ ದಾಖಲಿಸಿಕೊಂಡಿದೆ. ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಭಾಷಣ ಮಾಡುವ ವೇಳೆ ಸಚಿವ ತಂಗಡಗಿಯವರು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕೆಂದು ಆವೇಷದಲ್ಲಿ ಹೇಳಿದ್ದರು.

ಇದನ್ನು ಅಸ್ತ್ರ ಮಾಡಿಕೊಂಡಿದ್ದ ಬಿಜೆಪಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

RELATED ARTICLES

Latest News