ಬುರ್ದಾವನ್(ಬೆಂಗಾಲ),ಜ.29- ಇಲ್ಲಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದರ ಕೋವಿಡ್ ವಾರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಒಬ್ಬ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸಂಧ್ಯಾ ರಾಯ್(60) ಬೆಂಕಿಗೆ ಆಹುತಿಯಾಗಿರುವ ಮಹಿಳೆ.
ಪೂರ್ವ ಬುರ್ದಾವನ್‍ನ ಬುದ್ರ್ವಾಮೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಾಧರಾಣಿ ವಾರ್ಡ್‍ನಲ್ಲಿ ಈ ಘಟನೆ ಸಂಭವಿಸಿದೆ. ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ವಾರ್ಡ್‍ನ್ನು ಕೋವಿಡ್ ವಾರ್ಡ್‍ನ ವಿಶೇಷ ಘಟಕವಾಗಿ ಪರಿವರ್ತಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಿನ್ನೆ ಬೆಳಗ್ಗೆ ಇದ್ದಕ್ಕಿದ್ದಂತೆ ವಾರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೋಗಿಗಳು ಮತ್ತು ಅವರ ಸಂಬಂಕರು ಆತಂಕಗೊಂಡಿದ್ದರು. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು.
ಸತತ ಒಂದು ಗಂಟೆ ಕಾಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.ಘಟನೆ ಬಗ್ಗೆ ಆಸ್ಪತ್ರೆಯ ಬೇಜಾವಬ್ದಾರಿತನವಿದೆ ಎಂಬುದನ್ನು ಆಡಳಿತ ಮಂಡಳಿ ನಿರಾಕರಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆಗಾಗಿ ಐದು ಸದಸ್ಯರುಳ್ಳ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
