Tuesday, December 3, 2024
Homeರಾಷ್ಟ್ರೀಯ | Nationalಚೆನ್ನೈ ವಿಮಾನ ನಿಲ್ದಾಣದ ಎಟಿಸಿ ಕಟ್ಟಡದಲ್ಲಿ ಬೆಂಕಿ

ಚೆನ್ನೈ ವಿಮಾನ ನಿಲ್ದಾಣದ ಎಟಿಸಿ ಕಟ್ಟಡದಲ್ಲಿ ಬೆಂಕಿ

ಚೆನ್ನೈ,ಮೇ.23-ಇಲ್ಲಿನ ಅಂತರಾಷ್ಟೀಯ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲ್‌ (ಎಟಿಸಿ) ಕಟ್ಟಡದ ಮೂರನೇ ಮಹಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

ಹಳೆಯ ವಸ್ತುಗಳನ್ನು ಸಂಗ್ರಹಿಸಲು ಬಳಸಿದ ಸ್ಥಳದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಎಚ್ಚೆತ್ತ ಸಿಬ್ಬಂದಿ ಬೆಂಕಿಯನ್ನು ನಂಧಿಸಿದ್ದು ಯಾವುದೇ ಹಾನಿ ಸಂಭವಿಸಿಲ್ಲ.ಅಶೋಕ್‌ ನಗರ ಮತ್ತು ಗಿಂಡಿಯಿಂದ ಅಗ್ನಿಶಾಮಕ ವಾಹನಗಳನ್ನು ಸೇವೆಗೆ ಬಲಸಿಕೊಳ್ಳಲಾಗಿದ್ದು ಬೆಂಕಿಯನ್ನು ತ್ವರಿತವಾಗಿ ನಂದಿಸಲಾಗಿದೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಮೂಲಗಳು ತಿಳಿಸವೆ

RELATED ARTICLES

Latest News