Tuesday, December 3, 2024
Homeಬೆಂಗಳೂರುಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಪಬ್‍

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಪಬ್‍

ಬೆಂಗಳೂರು,ಅ.18- ಇತ್ತೀಚೆಗೆ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡ ಮಾಸುವ ಮುನ್ನವೇ ನಗರದ ಪಬ್‍ವೊಂದರಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಾವರೆಕೆರೆ ಮುಖ್ಯ ರಸ್ತೆ, ಫೋರಂ ಎದುರಿನ ನಾಲ್ಕು ಅಂತಸ್ತಿನ ಕಟ್ಟಡದ ಮೇಲಂತಸ್ತಿನಲ್ಲಿ ಇರುವ ಮಡ್ ಪೈಪ್ ಪಬ್‍ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಾರಿ ಹೊಗೆ ಆವರಿಸಿದ್ದು ನೋಡನೋಡುತ್ತಿದ್ದಂತೆ ಪಬ್‍ನ ಮೇಲ್ಛಾವಣಿ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಪಬ್‍ನಲ್ಲಿದ್ದ ಸಿಬ್ಬಂದಿ ತಕ್ಷಣ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ 4ನೇ ಅಂತಸ್ತಿನಲ್ಲಿದ್ದ ವ್ಯಕ್ತಿಯೊಬ್ಬರು ಕೆಳಗೆ ಜಿಗಿದು ಪ್ರಾಣ ಉಳಿಸಿಕೊಂಡು ಗಾಯಗೊಂಡಿದ್ದು, ಅವರನ್ನು ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸಿಬಿಐ ತನಿಖೆ ಅಗತ್ಯತೆ ಕುರಿತು ಐಟಿ ಅಧಿಕಾರಿಗಳೇ ನಿರ್ಧರಿಸುತ್ತಾರೆ : ಪರಮೇಶ್ವರ್

ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಎಂಟು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿ ಹರಸಾಹಸಪಟ್ಟು ಬೆಂಕಿಯನ್ನು ತಹಬದಿಗೆ ತಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕಟ್ಟಡದ ನೆಲಮಾಳಿಗೆ ಹಾಗೂ ಮೊದಲನೇ ಮಹಡಿಯಲ್ಲಿ ನೆಕ್ಸಾ ಮಾರುತಿ ಕಾರು ಶೋರೂಂ ಇದೆ. ನಾಲ್ಕನೇ ಮಹಡಿಯಲ್ಲಿ ಪಬ್‍ನಡೆಸಲಾಗುತ್ತಿತ್ತು.

ಬೆಂಕಿಯಿಂದಾಗಿ ಶೋರೂಂಗೆ ಸೇರಿದ ಐಷರಾಮಿ ಕಾರೊಂದು ಸಂಪೂರ್ಣ ಸುಟ್ಟು ಹಾನಿಯಾಗಿದೆ. ಪಬ್‍ನಲ್ಲಿದ್ದ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆ ಪಬ್‍ನ ಪಕ್ಕದ ಕಟ್ಟಡಕ್ಕೂ ವ್ಯಾಪಿಸುವ ಸಾಧ್ಯತೆಯಿದ್ದುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಬೆಂಕಿಯಿಂದಾಗಿ ಕಟ್ಟಡದ ಮೇಲಂತಸ್ತಿನಲ್ಲಿದ್ದ ಪಬ್‍ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ.

ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?

ಶಾರ್ಟ್ ಸಕ್ರ್ಯೂಟ್ ಶಂಕೆ:
ಪಬ್‍ನಲ್ಲಿ ಅಡುಗೆ ಸಿಲಿಂಡರ್‍ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರಬಹುದೇ ಅಥವಾ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Latest News