Friday, April 18, 2025
Homeಬೆಂಗಳೂರುನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ, ಇಬ್ಬರು ಕಾರ್ಮಿಕರ ಸಜೀವ ದಹನ

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ, ಇಬ್ಬರು ಕಾರ್ಮಿಕರ ಸಜೀವ ದಹನ

Fire in under-construction building, worker dies

ಬೆಂಗಳೂರು, ಫೆ.06– ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ರೋಷನ್, ಉದಯ್ ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬ ಪೇಂಟರ್, ಮತ್ತೊಬ್ಬರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು.ಕಡಬಗೆರೆ ಕ್ರಾಸ್‍ನಲ್ಲಿ ಸತೀಶ್ ಎಂಬುವರು ನಾಲ್ಕು ಅಂತಸ್ತಿನ ಮನೆ ನಿರ್ಮಾಣ ಮಾಡಿಸುತ್ತಿದ್ದು, ಕೆಲ ಕಾರ್ಮಿಕರು ಈ ಕಟ್ಟಡದಲ್ಲೇ ಅಡುಗೆ ಮಾಡಿಕೊಂಡು ಅಲ್ಲೇ ವಾಸವಿರುತ್ತಾರೆ.

ಇಂದು ಮಧ್ಯಾಹ್ನ ಈ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಕ್ಕ-ಪಕ್ಕದವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ದಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಾಗಲೇ ಇಬ್ಬರು ಸಜೀವ ದಹನವಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆಗೆ ಬಳಸಿದ ಸಿಲಿಂಡರ್‍ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡು ಅಗ್ನಿ ಅವಘಡ ಸಂಭವಿಸಿರಬಹುದೇ ಅಥವಾ ವೆಲ್ಡಿಂಗ್ ಮಾಡುವಾಗ ಬೆಂಕಿ ಕಿಡಿಯಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News