ಬೆಂಗಳೂರು,ಜು.16- ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡು ಭಾಗಶಃ ಹಾನಿಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹೆಣ್ಣೂರು-ನಾಗವಾರ ರಸ್ತೆಯ ನೇತ್ರಾಲಯ ಸಮೀಪ ರಾತ್ರಿ 10.30ರ ಸುಮಾರಿನಲ್ಲಿ ಕಾರು ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಕಾರು ಚಾಲನೆ ಮಾಡುತ್ತಿದ್ದವರ ಗಮನಕ್ಕೆ ಬಂದ ತಕ್ಷಣ ಕಾರು ನಿಲ್ಲಿಸಿ ಕೆಳಗೆ ಇಳಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿ ನೋಡನೋಡುತ್ತಿದ್ದಂತೆ ಕಾರನ್ನು ಪೂರ್ತಿ ಆವರಿಸಿಕೊಂಡಿದ್ದರಿಂದ ಶೇ.70ರಷ್ಟು ಸುಟ್ಟು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಸುದ್ದಿ ತಿಳಿದು ಹೆಣ್ಣೂರು ಠಾಣೆ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಕಾರಿನ ಬ್ಯಾಟರಿ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.