Sunday, November 24, 2024
Homeರಾಜ್ಯದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ

ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ನ.3- ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿ ಪಟಾಕಿ ಸಿಡಿಸಲು ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಸಿರು ಪಟಾಕಿಗಳ ಮೇಲೆ ಹಾಗು ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರಬೇಕು ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ, ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ ನಿಗತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೆ ಮುಟ್ಟುಗೋಲು ಹಾಕಿಕೊಳ್ಳಬೇಕು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದು.

ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗು ಇನ್ನಾವುದೇ ನಿಷೇತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು.

ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲು, ಬಸ್ ನಿಲ್ದಾಣ, ಮಾಲ್‍ಗಳಲ್ಲಿ ಕರಪತಭಿತ್ತಿಪತ್ರಗಳನ್ನು ಹಂಚುವ ಮೂಲಕ ಆಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವುದು.

ಸ್ಥಳೀಯ ಟಿ.ವಿ. ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು. ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗು ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು.

ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.ಸದರಿ ಆದೇಶದಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸಮಯ: ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮೇಲ್ಯಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಸಿರುತ್ತದೆ.

ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗು ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಅಂತಹ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

RELATED ARTICLES

Latest News