Friday, November 22, 2024
Homeಇದೀಗ ಬಂದ ಸುದ್ದಿಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

ಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

ಇಂಫಾಲ್, ಅ 20 – ಇಲ್ಲಿನ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ ಮೂವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಮೂವರು ವ್ಯಕ್ತಿಗಳು ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಇದರಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ದಾಳಿ ಮಡೆಸಿ ಮೂವರು ಆರೋಪಿಗಳು ವಾಹನದಲ್ಲಿ ಪರಾರಿಯಾಗಿದ್ದರು,ಕಳೆದ ರಾತ್ರಿಯೇ ಬಂಧಿಸಿ ಅವರ ಬಳಿಯಿದ್ದ ಒಂದು .32 ಪಿಸ್ತೂಲ್ ಸಹಿತ ಮದ್ದುಗುಂಡು ಮತ್ತು 1 5 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರದ ಎರಡು ಕ್ಷೇತ್ರಳಲ್ಲಿ ಶೇ.68 ಕ್ಕಿಂತ ಹೆಚ್ಚು ಮತದಾನವಾಗಿದೆ

RELATED ARTICLES

Latest News