Friday, November 22, 2024
Homeರಾಷ್ಟ್ರೀಯ | Nationalಜೂ.24ರಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

ಜೂ.24ರಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ, ಜೂ.12 (ಪಿಟಿಐ) ಹದಿನೆಂಟನೆ ಲೋಕಸಭೆಯ ಮೊದಲ ಅಧಿವೇಶನ ಜೂನ್‌ 24ರಿಂದ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.

ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಥವಾ ಲೋಕಸಭೆಯ ಸದಸ್ಯತ್ವದ ದಢೀಕರಣವನ್ನು ಮಾಡುತ್ತಾರೆ ಮತ್ತು ಸದನದ ಸ್ಪೀಕರ್‌ ಅನ್ನು ಆಯ್ಕೆ ಮಾಡುತ್ತಾರೆ ಮತ್ತು ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್‌ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ ಎಂದು ರಿಜಿಜು ಎಕ್ಸ್ ಮಾಡಿದ್ದಾರೆ.

ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್‌ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿದೆ ಎಂದು ಅವರು ಹೇಳಿದರು. ಜೂನ್‌ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ಮೋದಿ ಅವರು ಸಂಸತ್ತಿಗೆ ತಮ ಮಂತ್ರಿಮಂಡಲವನ್ನು ಪರಿಚಯಿಸುವ ನಿರೀಕ್ಷೆಯಿದೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯು ವಿವಿಧ ವಿಷಯಗಳಲ್ಲಿ ಎನ್‌ಡಿಎ ಸರ್ಕಾರವನ್ನು ಮೂಲೆಗುಂಪು ಮಾಡಲು ಆಕ್ರಮಣಕಾರಿ ಪ್ರತಿಪಕ್ಷಗಳು ಪ್ರಯತ್ನಿಸುತ್ತಿರುವುದನ್ನು ನಿರೀಕ್ಷಿಸಲಾಗಿದೆ. ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ.

RELATED ARTICLES

Latest News