Monday, June 2, 2025
Homeರಾಜ್ಯಸೋಮಾರಿ ಸಚಿವರನ್ನು ಮೊದಲು ಕಿತ್ತು ಹಾಕಿ : ಆರ್‌.ಆಶೋಕ್‌

ಸೋಮಾರಿ ಸಚಿವರನ್ನು ಮೊದಲು ಕಿತ್ತು ಹಾಕಿ : ಆರ್‌.ಆಶೋಕ್‌

First remove lazy ministers

ಬೆಂಗಳೂರು,ಮೇ 31- ಅಧಿಕಾರಿಗಳ ಮೇಲೆ ತಾರಾಟೆಗೆ ತೆಗೆದುಕೊಳ್ಳುವ ಮೊದಲು ಸಚಿವ ಸಂಪುಟ ಸಚಿವರಿಗೆ ನಿಮ ಮಾತು, ಆದೇಶ ಪಾಲನೆ ಮಾಡುವಂತೆ ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಆಶೋಕ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿ ವಿರುದ್ದ ಸಾಲು ಸಾಲು ಪೋಸ್ಟ್‌ ಮಾಡಿರುವ ಆಶೋಕ್‌, ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಡಿಸಿ, ಸಿಇಒ ಗಳ ಸಭೆಯಲ್ಲಿ ಅಧಿಕಾರಿಗಳಿಗೆ ತಮ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಲಾಸ್‌‍ ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಕಾಂಗ್ರೆಸ್‌‍ ಸರ್ಕಾರದಲ್ಲಿ ಆಡಳಿತ ಯಂತ್ರ ಹೇಗೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ ಬೇಡಿಕೆಗೆ ಹೈಕಮಾಂಡ್‌ ಯಾಕೆ ಸೊಪ್ಪು ಹಾಕುತ್ತಿಲ್ಲ? ಇದು ತಾವು ನಿರ್ಗಮಿತ ಸಿಎಂ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಂಪುಟ ವಿಸ್ತರಣೆ/ಪುನಾರಚನೆ ಯಾಕೆ ಎಂದು ಸುಮನಿದ್ದಾರೋ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿ.ಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲಾ ತಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್‌‍ ತೆಗೆದುಕೊಂಡು ನಿಮ ದಮು ತಾಕತ್ತು ತೋರಿಸಿ ಎಂದು ಸವಾಲು ಎಸೆದಿದ್ದಾರೆ.

ಮನೆಯ ಯಜಮಾನ ಸರಿ ಇಲ್ಲದೆ ಹೋದರೆ ಹೇಗೆ ಸಂಸಾರ ಬೀದಿಗೆ ಬರುತ್ತದೋ ಅದೇ ರೀತಿ ಒಂದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಹಿಡಿತ ಇಲ್ಲದೆ ಹೋದರೆ ಆಡಳಿತ ಯಂತ್ರ ಹಳ್ಳ ಹಿಡಿಯುತ್ತದೆ. ಮುಖ್ಯಮಂತ್ರಿ ಮಾತಿಗೆ ಸಚಿವರೇ ಕಿಮತ್ತು ಕೊಡುತ್ತಿಲ್ಲ ಎಂದರೆ ಆಡಳಿತಶಾಹಿಯಲ್ಲಿ ಗೊಂದಲ ಮೂಡಿಸುತ್ತದೆ ಎಂದು ಟೀಕಿಸಿದ್ದಾರೆ.

ತಾವು ಸಚಿವರಿಗೆ ನೀಡಿರುವ ನಿರ್ದೇಶಗಳಲ್ಲಿ ಯಾವುದಾದರೂ ಒಂದಾದರೂ ಪಾಲನೆ ಆಗುತ್ತಿದೆಯಾ? ತಿಂಗಳಲ್ಲಿ ಒಂದು ದಿನ ಜನತಾದರ್ಶನ ಮಾಡಿ ಎಂದರೂ ಮಾಡುತ್ತಿಲ್ಲ.ಜಿಲ್ಲಾ ಪ್ರವಾಸ ಮಾಡಿ ಜನರ ಸಮಸ್ಯೆ ಕೇಳಿ ಎಂದರೂ ಮಾಡುತ್ತಿಲ್ಲ. ಕನಿಷ್ಠಪಕ್ಷ ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿ ಎಂದರೂ ಗುರುವಾರದ ಸಂಪುಟ ಸಭೆ ಬಿಟ್ಟರೆ ಬಹುತೇಕ ಸಚಿವರು ವಿಧಾನಸೌಧದತ್ತ ತಲೆಯೂ ಹಾಕುತ್ತಿಲ್ಲ. ನಿವೃತ್ತ ಅಧಿಕಾರಿಗಳನ್ನು ಹೊರ ಗುತ್ತಿಗೆ ಸೇವೆಯಿಂದ ತಕ್ಷಣ ಬಿಡುಗಡೆ ಮಾಡಿ ಎಂದರೂ ಬಿಡುಗಡೆ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.
ರೈತರ ಆತಹತ್ಯೆ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ ಎಂದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಕಳೆದ ವರ್ಷದ ಪರಿಹಾರ ವಿತರಣೆಯೇ ಬಾಕಿ ಇದೆ.

ಕೆರೆ ಒತ್ತುವರಿ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಿ ಎಂದು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದನ್ನು ಯಾರೂ ಕೇರ್‌ ಮಾಡಿಲ್ಲ. ರಾಜಕಾಲುವೆ ಅಕ್ರಮ ಒತ್ತುವರಿ ತೆರವು ಮಾಡಿ ಎಂದು ನಗರ ಪ್ರದಕ್ಷಿಣೆ ಹಾಕಿ ಬಂದರೂ ಯಾರೂ ಕ್ಯಾರೆ ಅನ್ನುತ್ತಿಲ್ಲ. ಜನಸ್ಪಂದನ ಅರ್ಜಿ ವಿಲೇವಾರಿ ತ್ವರಿತವಾಗಿ ಆಗಬೇಕು ಎಂಬ ಸೂಚನೆ ಭಾಷಣಕ್ಕೆ ಸೀಮಿತವಾಯಿತು ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

ಮೈಕ್ರೋಫೈನಾನ್‌್ಸ ದೌರ್ಜನ್ಯ ಪ್ರಕರಣಗಳ ಬಗ್ಗೆ ಕೆಡಿಪಿ ಸಭೆಗಳಲ್ಲಿ ಪರಿಶೀಲನೆ ನಡೆಸಿ ಎಂದರೂ ತಮ ಮಾತಿಗೆ ಕವಡೆ ಕಾಸಿನ ಕಿಮತ್ತಿಲ್ಲ. ನಿಮ ಗಮನಕ್ಕೆ ಬಂದಿದೆಯೇ ಇಲ್ಲವೋ ಗೊತ್ತಿಲ್ಲ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆಯೂ ಕೊಡಗಿನಲ್ಲಿ ಒಂದು ಆತಹತ್ಯೆ ಆಗಿದೆ. ಡಿಸಿಎಂ ಸಾಹೇಬರು ನೋಡಿದರೆ ತಾವು ನೇಮಕಾತಿ ಮಾಡಿದ ಎಂಜಿನಿಯರ್‌ಗಳ ವರ್ಗಾವಣೆ ಆದೇಶಕ್ಕೆ ಸಡ್ಡು ಹೊಡೆದು ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದು ತಮ ಅನುಮತಿ ಇಲ್ಲದೆ ಮಾಡುವಂತಿಲ್ಲ ಎಂದು ಧಮ್ಕಿ ಹಾಕುತ್ತಾರೆ. ನಿಮ ಘನಂದಾರಿ ಕಾರ್ಯವೈಖರಿ ಬಗ್ಗೆ ಹೇಳುತ್ತಾ ಹೋದರೆ ಇನ್ನೂ ದೊಡ್ಡ ಪಟ್ಟಿಯೇ ಇದೆ ಎಂದು ಆಶೋಕ್‌ ಸರ್ಕಾರ ಮೇಲೆ ಟೀಕೆಗಳ ವಾಗ್ಬಾಣ ಬಿಟ್ಟಿದ್ದಾರೆ.

RELATED ARTICLES

Latest News