ತಿರುಚಿರಾಪಳ್ಳಿ (ತಮಿಳುನಾಡು),ಫೆ.26– ಕರೂರ್ ಜಿಲ್ಲೆಯ ಕುಳಿತಲೈ ಬಳಿ ಮುಂಜಾನೆ ಪ್ರಯಾಣಿಸುತ್ತಿದ್ದ ಕಾರು ಮತ್ತು ರಾಜ್ಯ ಸಾರಿಗೆ ನಿಗಮದ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾದ ಪರಿಣಾಮ ಐವರು ತಕ್ಷಣ ಸಾವನ್ನಪ್ಪಿದ್ದಾರೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆಯಲು ಸುಟ್ಟ ಕಾರನ್ನು ಕತ್ತರಿಸಬೇಕಾಯಿತು.
ಪೊಲೀಸರ ಪ್ರಕಾರ ಕರೂರ್-ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಕರೂರೈ ಹೋಗುತ್ತಿದ್ದ ಕಾರು ಮತ್ತು ಅರಂತಂಗಿಯಿಂದ ತಿರುಪ್ಪಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತರು ಕೊಯಮತ್ತೂರಿನ ಕುನಿಯಮುತ್ತೂರು ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.