Friday, May 24, 2024
Homeರಾಷ್ಟ್ರೀಯಲಕ್ನೋದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು

ಲಕ್ನೋದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು

ಲಕ್ನೋ, ಮಾ.6: ಇಲ್ಲಿನ ಹತಾ ಹಜರತ್ ಸಾಹಬ್ ಪ್ರದೇಶದಲ್ಲಿನ ಮನೆಯೊಂದರಲ್ಲಿ ಎಲ್‍ಪಿಜಿ ಸಿಲಿಂಡರ್‍ಗಳು ಸೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಕಳೆದ ರಾತ್ರಿ 10.30ರ ಸುಮಾರಿಗೆ ಕಾಕೋರಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಸ್ಫೋಟಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸಕ್ರ್ಯೂಟ್ ನಿಂದ ಸೋಟ ಸಂಭವಿಸಿದೆ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುಶೀರ್ (50), ಅವರ ಪತ್ನಿ ಹುಸ್ನ್ ಬಾನೋ (45), ರೈಯಾ (7), ಉಮಾ (4) ಮತ್ತು ಹಿನಾ (2) ಎಂದು ಗುರುತಿಸಲಾಗಿದೆ.

ಗಾಯಗೊಂಡಿರುವ ಇಶಾ, 17, ಲಕಾಬ್, 21, ಅಮ್ಜದ್, 34, ಮತ್ತು ಅನಮ್, 18 ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಹಿತಿ ಬಂದ ನಮತರ ಅಗ್ನಿಶಾಮಕ ದಳದ ಮೂರು ತಂಡಗಳು ಹಾಗೂ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದೆ ಅಕ್ಕ ಪಕ್ಕ ಮನೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಯಿತು .

ರಕ್ಷಣಾ ಕಾರ್ಯ ವೇಳೆ ಕುಟುಂಬದ ಒಂಬತ್ತು ಸದಸ್ಯರನ್ನು ಸಮೀಪದ ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿಯ ಟ್ರಾಮಾ ಸೆಂಟರ್‍ಗೆ ದಾಖಲಿಸಲಾಯಿತು ಆದರೆ ಅವರಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News