ಹೈದರಾಬಾದ್,ಆ.8- ತಿರುಪತಿಗೆ ತೆರಳುತ್ತಿದ್ದ ಕಾರು ನಿಂತ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಪ್ರಕಾಶಂ ಜಿಲ್ಲೆಯ ಮಾರ್ಚಾಲದ ಸಮೀಪ ಸಂಭವಿಸಿದೆ.
ಮೃತರನ್ನು ಪಲ್ನಾಡು ಜಿಲ್ಲೆಯ ವೇಲ್ ದುರ್ತಿ ತಾಲ್ಲೂಕಿನ ಸಿರಿಗಿರಿ ಪಾಡು ನಿವಾಸಿಗಳಾದ ಅನಿಮಿ ರೆಡ್ಡಿ(60), ಗುರುವಮ್ಮ(60), ಅನಂತಮ್ಮ(55), ಆದಿಲಕ್ಷ್ಮಿ(58) ಮತ್ತು ನಾಗಿರೆಡ್ಡಿ(24) ಎಂದು ಗುರುತಿಸಲಾಗಿದೆ.
ಅಪಘಾತದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೆÇಲೀಸರು ಸ್ಥಳೀಯರ ನೆರವಿನೊಂದಿಗೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಮೀಪ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ನಿಂತ ಟ್ರಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.