ಯಾದಗಿರಿ, ಜೂ.6- ದರ್ಗಾದ ಉರುಸ್ ಜಾತ್ರೆಗೆ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗ ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಆಂಧ್ರ ಪ್ರದೇಶ ಬಂಡಿ ಆತ್ಮಕೂರು ಗ್ರಾಮದ ಮುನೀರ್(40) ಪುತ್ರ ಮುದಾಸೀರ್ (12), ಹಾಗೂ ವೆಲುಗೋಡ ಗ್ರಾಮದ ನಯಮತ್ (40), ರಮೀಜಾ ಬೇಗಂ (50) ಮತ್ತು ಸುಮ್ಮಿ (12) ಮೃತ ದುರ್ದೈವಿಗಳು. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಈ ಪೈಕಿ ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ರಾಯಚೂರಿನ ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಿಂದ ಒಟ್ಟು 18 ಮಂದಿ ಸಂಬಂಧಿಕರು ಗುಲ್ಬರ್ಗಾದ ಕಾಜೆಬಂದ ನವಾಜ್ ದರ್ಗಾದ ಉರುಸ್‍ಗೆ ಕ್ರೂಸರ್ ವಾಹನದಲ್ಲಿ ಹೋಗುತ್ತಿದ್ದಾಗ ಯಾದಗಿರಿಯ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ-150ರ ಬಳಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ರಸ್ತೆ ಪಕ್ಕ ನಿಂತಿದ್ದ ಲಾರಿಯನ್ನು ಕ್ರೂಸರ್ ವಾಹನದ ಚಾಲಕ ಗಮನಿಸದೆ ಚಾಲನೆ ಮಾಡುತ್ತ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗ ಸೇರಿದಂತೆ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೊಲೀಸರ ಬೇಜವಾಬ್ದಾರಿ, ಅತ್ಯಾಚಾರಕ್ಕಾಳಗಾದ ಸಂತೃಸ್ಥೆಯ ತಂದೆ ಆತ್ಮಹತ್ಯೆ
ಸುದ್ದಿ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ. ಸಿಬಿ ವೇದಮೂರ್ತಿ, ಡಿವೈಎಸ್‍ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ. ಹೈವೇ ಪಕ್ಕದಲ್ಲಿ ಲಾರಿಯನ್ನು ನಿಲ್ಲಿಸಿದ್ದಾಗ ನಸುಗಿನ ಜಾವ 4 ಗಂಟೆ ಸುಮಾರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಚಾಲನೆ ಮಾಡಿಕೊಂಡು ಬಂದಿರುವುದರಿಂದ ಈ ಅಪಘಾತ ನಡೆದಿರುವ ಸಾಧ್ಯತೆ ಇದೆ ಎಂದು ಎಸ್‍ಪಿ ತಿಳಿಸಿದ್ದಾರೆ.
Five, #killed, #Cruiser, #collided, #lorry,