ಚೆನ್ನೈ,ಜುಲೈ.1- ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದ್ದ ಸೆಕ್ಯೂರಿಟಿಗಾರ್ಡ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಬಂಧಿಸಲಾಗಿದೆ.ಜೂನ್ 28 ರಂದು ಈ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಡರಾತ್ರಿ ಅಧಿಕೃತ ಮಾಹಿತಿ ತಿಳಿಸಿದೆ.
ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಆರಂಭಿಸಲಾಗಿದ್ದು ಮತ್ತು ನಿನ್ನೆ ರಾತ್ರಿ ಬಂದ ಮರಣೋತ್ತರ ಪರೀಕ್ಷೆಯ ವರದಿಯ ನಂತರ, ಯಾವುದೇ ವಿಳಂಬವಿಲ್ಲದೆ ಮುಂದಿನ ಕ್ರಮ ಕೈಗೊಳ್ಳಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೊಲೆ ಆರೋಪಗಳನ್ನು ಹೊರಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಪೊಲೀಸರನ್ನು ಬಂಧಿಸಲಾಗಿದೆ. ಮತ್ತು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.ಈ ದುರದೃಷ್ಟಕರ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ನ್ಯಾಯಯುತ, ಪಾರದರ್ಶಕ ಮತ್ತು ಪಕ್ಷಪಾತವಿಲ್ಲದ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗಾದ ತಿರುಪ್ಪುವನಂನ ನಿವಾಸಿ ಸೆಕ್ಯೂರಿಟಿಗಾರ್ಡ್ ಅಜಿತ್‌ಕುಮಾರ್ ಎಂಬುವವರನ್ನು ಸ್ಥಳೀಯ ಪೊಲೀಸರು ಬಂಧಿಸಿ ಹೊಡೆದಿದ್ದರೆ ಈ ವೇಳೆ ಆತ ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿದ್ದು ಇದು ರಾಜ್ಯಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು. ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು.
- ಐದು ರಾಷ್ಟ್ರಗಳ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ, ಟೀಕಿಸಿದ ಕಾಂಗ್ರೆಸ್
- ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆ ನಿರೀಕ್ಷೆ
- ಬಿಎಸ್ಎಫ್ ಯೋಧನ ಪತ್ನಿ ಮೇಲೆ ಅತ್ಯಾಚಾರ
- ನನಗೆ ಮಂತ್ರಿಗಿರಿಯ ಆಸೆಯಿಲ್ಲ : ರಾಜುಕಾಗೆ
- ಕೋಲಾರದಲ್ಲಿ ರಾಜಕೀಯ ಕಾದಾಟ, ಶಾಸಕರ ನಡುವೆ ಬಹಿರಂಗ ವಾಕ್ಸಮರ