ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ಸಾವು

Social Share

ಹೈದರಾಬಾದ್,ಜ.11- ಸ್ನಾನ ಮಾಡಲು ನದಿಗಿಳಿದ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಪೈಕಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಉಳಿದಿಬ್ಬರ ಶೋಧ ಕಾರ್ಯ ನಡೆಯುತ್ತಿದೆ. ಏತನೂರು ಗ್ರಾಮದ 12 ವರ್ಷದ ಅಜಯ್, ಚರಣ್, ಬಾಲಯೇಸು, ರಾಕೇಶ್ ಮತ್ತು ಸನ್ನಿ ಎಂಬುವರು ನಿನ್ನೆ ನದಿಗಿಳಿದಿದ್ದರು. ಈ ವೇಳೆ ಐವರೂ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಮೂವರ ಮೃತದೇಹಗಳು ಪತ್ತೆಯಾಗಿವೆ.
ನದಿಯ ದಡದಲ್ಲಿ ವಿದ್ಯಾರ್ಥಿಗಳ ಸೈಕಲ್‍ಗಳು ಮತ್ತು ಬಟ್ಟೆಗಳು ಬಿದ್ದಿದ್ದವು ಇದನ್ನ ಕಂಡ ಸ್ಥಳೀಯ ನಿವಾಸಿಗಳಿಗೆ ಮಕ್ಕಳು ನೀರಿನಲ್ಲಿ ಮುಳುಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಕಂದಾಯ ಅಧಿಕಾರಿಗಳು ಹಾಗೂ ಚಂದರ್ಲಪಾಡು ಸರ್ಕಲ್ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಇಂದು ಬೆಳಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ತಂಡ ಮೂರು ವಿದ್ಯಾರ್ಥಿಗಳ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ.ಇನ್ನಿಬ್ಬರು ವಿದ್ಯಾರ್ಥಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Articles You Might Like

Share This Article