Tuesday, September 17, 2024
Homeರಾಷ್ಟ್ರೀಯ | Nationalಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಶ್ರೀನಗರ,ನ.17- ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಸೇನಾಪಡೆ ಮತ್ತು ಪಾಕಿಸ್ತಾನ ಮೂಲದ ಲಷ್ಕರ್- ಇ-ತೊಯ್ಬ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿ ದ್ದಾರೆ. ಆಪರೇಷನ್ ಕಲಿ ಹೆಸರಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

ಕುಲ್ಗಾಂ ಜಿಲ್ಲೆಯ ಸ್ಯಾಮ್ನೊಪಾಕೆಟ್‍ನ ಡಿ.ಎಚ್. ಪೋರಾ ಪ್ರದೇಶದಲ್ಲಿ ಪಾಕ್ ಮೂಲದ ಉಗ್ರರು ಭಾರತದೊಳಗೆ ಒಳನುಸುಳಲು ಹೊಂಚು ಹಾಕಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಸೇನಾಪಡೆ ಗುರುವಾರವೇ ಉಗ್ರರನ್ನು ಸದೆಬಡೆಯುವ ಕಾರ್ಯಾಚರಣೆಗೆ ಇಳಿದಿತ್ತು. ಸೇನೆಯ 34 ರಾಷ್ಟ್ರೀಯ ರೈಫೆಲ್ಸ್, ಎಲೈಟ್, ಸ್ಪೆಷಲ್ ಫೋರ್ಸ್ ಯುನಿಟ್ ಹಿರಿಯ ಪೊಲೀಸರು, ಸಿಆರ್‍ಪಿಎಫ್ ಯೋಧರು ಜಂಟಿಯಾಗಿ ಕಾರ್ಯಚರಣೆ ಆರಂಭಿಸಿದ್ದರು.

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

ನಿನ್ನೆ ರಾತ್ರಿಯಾಗಿದ್ದರಿಂದ ಸ್ಥಳೀಯ ಗ್ರಾಮಸ್ಥರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಸೇನಾಪಡೆ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಪುನಃ ಇಂದು ಬೆಳಗ್ಗೆ ಉಗ್ರರ ಬೇಟೆಗೆ ಕಾರ್ಯಾಚರಣೆಗೆ ಇಳಿದಾಗ ಶರಣಾಗುವಂತೆ ಸೂಚನೆ ಕೊಡಲಾಯಿತು. ಈ ವೇಳೆ ಶರಣಾಗುವ ಬದಲು ಉಗ್ರರು ಮನೆಗೆ ಬೆಂಕಿ ಹಚ್ಚಿ ಸೇನಾಪಡೆಗಳ ಮೇಲೆ ಪ್ರತಿದಾಳಿ ನಡೆಸಲು ಮುಂದಾದರು. ಈ ಹಂತದಲ್ಲಿ ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆಗಿಳಿದ ಸೇನಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾಗಿರುವ ಉಗ್ರರ ವಿವರಗಳು ತಿಳಿದುಬಂದಿಲ್ಲ. ಅವರ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಕಳೆದ ಅಕ್ಟೋಬರ್ 10ರಂದು ಕೂಡ ಶೋಪಿಯಾನ್‍ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‍ಕೌಂಟರ್ ನಡೆದಿತ್ತು. ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಎಂಬ ಇಬ್ಬರು ಉಗ್ರರು ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರೀತಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED ARTICLES

Latest News