13 ಸಾವಿರ ಮೀಟರ್ ಬಟ್ಟೆಯ ಬೃಹತ್ ರಾಷ್ಟ್ರಧ್ವಜ

Social Share

ಕೋಲಾರ,ಆ.15-ದೇಶಕ್ಕೆ ಸ್ವಾತಂತ್ರ್ಯ ಬಂದು 75 ಸಂವತ್ಸರ ಕಳೆದು ಅಮೃತ ಮಹೋತ್ಸವ ಆಚರಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಜನತೆಯೊಂದಿಗೆ ಸರ್ಕಾರ ಸದಾ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.
ನಗರದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದ ವಂದನೆ ಸ್ವೀಕರಿಸಿ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶವನ್ನು ಪರಕೀಯರ ಆಳ್ವಿಕೆಯಿಂದ ತಪ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಸ್ಮರಿಸಿ ಶುಭಾಶಯ ಕೋರಿದರು. ಜಿಲ್ಲೆಯ ಕೃಷಿ, ಪಶುಸಂಗೋಪನೆ, ರೇಷ್ಮೆ ಉದ್ಯಮವನ್ನೇ ನಂಬಿದ್ದ ಜನತೆಯು ಇದೀಗ ಕೈಗಾರಿಕೆಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ.

ಜಿಲ್ಲೆಯ ಪ್ರತಿಷ್ಠಿತ ಬಿಇಎಂಎಲ್ ಮತ್ತು ಬಿಜಿಎಂಎಲ್ ಕೈಗಾರಿಕೆಗಳ ಉಳಿದ ಪ್ರದೇಶಗಳು ಹಾಗೂ ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಒಟ್ಟು 4170 ಹೆಕ್ಟೇರ್ ಜಾಗವನ್ನು ಕೈಗಾರಿಕೆಗಳಿಗಾಗಿ ಮೀಸಲಿಟ್ಟು, ಭೂ ಸ್ವಾೀಧಿನ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದು ಹೇಳಿದರು.ಜಿಲ್ಲೆಯ ಎಲ್ಲಾ ಇಲಾಖೆಗಳ ಅಭಿವೃದ್ಧಿಯ ಅಂಕಿ-ಅಂಶಗಳು ಸಚಿವರು ಓದಿದರು.

ಸಮಾರಂಭದಲ್ಲಿ ಸಿಎಆರ್ ಇನ್ಸ್‍ಪೆಕ್ಟರ್ ಜಿಮ್ಮನಾಳ್ ನೇತೃತ್ವದಲ್ಲಿ ಪಥ ಸಂಚಲನ ನೆರವೇರಿತು. ಪೊಲೀಸ್, ಹೋಂ ಗಾರ್ಡ್‍ಗಳು, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸರ್‍ಎಂವಿ ಕ್ರೀಡಾಂಗಣದ ಸುತ್ತ 13 ಸಾವಿರ ಮೀಟರ್ ಬಟ್ಟೆಯಿಂದ ತಯಾರಿಸಿದ್ದ ಬೃಹತ್ ಧ್ವಜವನ್ನು ಪ್ರದರ್ಶಿಸಲಾಯಿತು. ಇದೇ ವೇಳೆ ನಗರದ ಮುಂಭಾಗದಲ್ಲಿರುವ ಕ್ಲಾಕ್ ಟವರ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಧ್ವಜಾರೋಹಣ ನೆರವೇರಿಸಿದರು.

ಸಮಾರಂಭದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ, ಪರಿಷತ್ ಸದಸ್ಯರಾದ ಗೋವಿಂದರಾಜು, ಅನಿಲ್‍ಕುಮಾರ್, ನಾರಾಯಣಸ್ವಾಮಿ, ನಜೀರ್ ಅಹಮ್ಮದ್, ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್, ಜಿಪಂ ಸಿಇಒ ಯುಕೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article