ಜಲ್ಪರ್‍ಗುರಿ, ಅ.6 -ಪಶ್ಚಿಮ ಬಂಗಾಳದಲ್ಲಿ ದುರ್ಗಾ ಮಾತೆ ಪ್ರತಿಮೆಗಳ ವಿಸರ್ಜನೆಯ ಸಂದರ್ಭದಲ್ಲಿ ಮಾಲ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದಾಗಿ 8 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿರುವ ಘಟನೆ ಇಲ್ಲಿ ನಡೆದಿದೆ.
ಮಜ್ಜನ ಸಮಾರಂಭದಲ್ಲಿ ಭಾಗವಹಿಸಲು ನೂರಾರು ಜನರು ಮಾಲ್ ನದಿಯ ದಡದಲ್ಲಿ ಜಮಾಯಿಸಿದ್ದರು ಇದ್ದಕ್ಕಿದ್ದಂತೆ, ಹಠಾತ್ ಪ್ರವಾಹ ಅಪ್ಪಳಿಸಿತು ಮತ್ತು ಜನರು ಕೊಚ್ಚಿಹೋದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದುವರೆಗೆ ಎಂಟು ಶವಗಳನ್ನು ಹೊರತೆಗೆಯಲಾಗಿದೆ ಅದರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ ಸುಮಾರು 50 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡಾರಾ ತಿಳಿಸಿದ್ದಾರೆ, ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಹಲವರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಎನ್‍ಡಿಆರ್‍ಎಫï, ಎಸ್‍ಡಿಆರ್‍ಎಫï, ಪೊಲೀಸ್ ಮತ್ತು ಸ್ಥಳೀಯ ಆಡಳಿತದ ತಂಡಗಳು. ಶೋಧ ಕಾರ್ಯಾ ನಡೆಸುತ್ತಿವೆ
ಮಾಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬುಲು ಚಿಕ್ಕ ಬರಾಕ್ ಸ್ಥಳಕ್ಕೆ ಭೇಟಿ ನೀಡಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಕಾರಿ ಅವರು ರಕ್ಷಣಾ ಪ್ರಯತ್ನಗಳನ್ನು ಹೆಚ್ಚಿಸುವಂತೆ ರಾಜ್ಯ ಆಡಳಿತವನ್ನು ವಿನಂತಿಸಿದ್ದಾರೆ.