ಏಮ್ಸ್‌ಗೆ ದಾಖಲಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Social Share

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳು ತಿಳಿಸಿವೆ.

ಹೊಟೇಲ್‍ಗಳಲ್ಲಿ ಸ್ಮೋಕಿಂಗ್ ಜೋನ್ ಕಡ್ಡಾಯ : ಬಿಬಿಎಂಪಿ ಆದೇಶ

ಸೀತಾರಾಮನ್ ಶನಿವಾರ ಚೆನ್ನೈನಲ್ಲಿರುವ ತಮಿಳುನಾಡು ಡಾ. ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು.

ನಿನ್ನೆ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆ ನವದೆಹಲಿಯ ‘ಸದೈವ್ ಅಟಲ್’ನಲ್ಲಿ ಪುಷ್ಪ ನಮನ ಸಲ್ಲಿಸಿದ್ದರು. ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಆತಂಕ ಮೂಡಿಸಿತ್ತು.

#DinanaceMinister, #NirmalaSitharaman, #reportedly, #admitted, #AIIMS,

Articles You Might Like

Share This Article