Monday, April 21, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಫುಡ್ ಡಿಲಿವರಿ ಬಾಯ್ ಸ್ಥಳದಲ್ಲೇ ಸಾವು

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಫುಡ್ ಡಿಲಿವರಿ ಬಾಯ್ ಸ್ಥಳದಲ್ಲೇ ಸಾವು

Food delivery boy dies on the spot after two bikes collide

ಹಾಸನ, ಏ.21 – ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಫುಡ್ ಡಿಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಭುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ನಲ್ಲಿ ನಡೆದಿದೆ.

ನಗರದ ಎಸ್‌ಬಿಎಂ ಲೇಔಟ್‌ನ ಶರಾವತಿ ಬಡಾವಣೆಯ ನಿವಾಸಿ ಶರತ್ (40) ಮೃತಪಟ್ಟ ವ್ಯಕ್ತಿ. ರಾತ್ರಿ 11 ಗಂಟೆ ಸುಮಾರಿನಲ್ಲಿ ಫುಡ್ ಡಿಲಿವರಿ ಮಾಡಲು ನಗರ ಕಡೆಯಿಂದ ಬಂದು ಗೆಂಡೆಗಟ್ಟೆಗೆ ಹೋಗುವ ರಸ್ತೆ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಕೆಳಗೆ ಬಿದ್ದ ಶರತ್‌ಗೆ ಗಂಭೀರವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್‌ ಸವಾರನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News