ಮುಖ್ಯರಸ್ತೆಗಳ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್

Social Share

ಬೆಂಗಳೂರು,ಜು.20- ನೋಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ ಅಗತ್ಯ ಹಣಕಾಸು ನೆರವು ನೀಡುವ ಕೇಂದ್ರ ಸರ್ಕಾರದ ಸ್ವನಿಧಿ ಯೋಜನೆ ಜಾರಿಗೊಳಿಸಲು ಸನ್ನದ್ಧವಾಗಿರುವ ಬೆನ್ನಲ್ಲೆ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ನೀಡಿದೆ.

ಇನ್ಮುಂದೆ ನಗರದ ಮುಖ್ಯರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ. ಮುಖ್ಯರಸ್ತೆ ಮತ್ತು ಅಡ್ಡ ರಸ್ತೆಗಳ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಲು ಪಾಲಿಕೆ ಅಜಾಕಾರಿಗಳು ಮುಂದಾಗಿದ್ದಾರೆ.

ಪ್ರಮುಖ ರಸ್ತೆಗಳ ಫುಟ್ಪಾತ್ ಮೇಲೆ ತಳ್ಳು ಗಾಡಿಗಳಲ್ಲಿ ವ್ಯಾಪಾರ ಮಾಡ್ತಿರೊದ್ರಿಂದ ಸಾರ್ವಜನಿಕರ ಓಡಾಟಕ್ಕೆ ಅನಾನೂಕೂಲವಾಗಿದೆ ಎಂಬ ಆಧಾರದ ಮೇಲೆ ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಕಾರ್ಯಚರಣೆ ನಡೆಸಲು ತೀರ್ಮಾನಿಸಲಾಗಿದೆ.

ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ವಹಿವಾಟು ನಡೆಸುವುದರಿಂದ ಜನ ಫುಟ್ಪಾತ್ಗಳ ಮೇಲೆ ಓಡಾಡದೆ ರಸ್ತೆಗಳಲ್ಲಿ ನಡೆದು ಹೋಗುವುದರಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿದೆ ಎಂಬ ಮಾಹಿತಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಗರ ಪೊಲೀಸ್ ಇಲಾಖೆಯ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಸಂಚಾರಿ ಪೊಲೀಸರು ಬೀದಿ ಬದಿ ವ್ಯಾಪಾರದಿಂದಲೇ ನಗರದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಎಂಬ ಮಾಹಿತಿ ನೀಡಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Articles You Might Like

Share This Article