Tuesday, October 8, 2024
Homeರಾಜ್ಯಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಮಾ.23- ರಾಜ್ಯ ಹೈಕೋರ್ಟ್‍ನ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮಾ.25 ರಿಂದ 28 ರವರೆಗೆ ಈ ಮೂರೂ ತರಗತಿಗಳಿಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರುಗಳಿಗೆ ಮೌಲ್ಯಾಂಕನವನ್ನು ನಡೆಸುವಂತೆ ಎಲ್ಲಾ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಕಾರಿಗಳು, ಉಪನಿರ್ದೇಶಕರು ಸೂಚಿಸಿ ಕ್ರಮ ಕೈಗೊಳ್ಳಲು ಮಂಡಳಿ ನಿರ್ದೇಶನ ನೀಡಿದೆ.

2023-24ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ಕಾರ್ಯವನ್ನು ಮಂಡಳಿಯು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ನಡೆಸುತ್ತಿದೆ.

ವೇಳಾಪಟ್ಟಿ :
ಮಾ.25 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ 5ನೇ ತರಗತಿಯ ಪರಿಸರ ಅಧ್ಯಯನ, 8 ನೇ ತರಗತಿಯ ತೃತೀಯ ಭಾಷೆ ಮಧ್ಯಾಹ್ನ 2.30 ರಿಂದ 5, ಮತ್ತು 9ನೇ ತರಗತಿಯ ತೃತೀಯ ಭಾಷೆ ಪರೀಕ್ಷೆ ಮಧ್ಯಾಹ್ನ 2 ರಿಂದ 5 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಮಂಡಳಿ ಪರಿಷ್ಕರಣೆ ಮಾಡಿದೆ.

ಮಾ.26 ರಂದು 5ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ, 8ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ 9ನೇ ತರಗತಿಯ ಗಣಿತ ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ.

ಮಾ.27 ರಂದು 8ನೇ ತರಗತಿಯ ವಿಜ್ಞಾನ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆ, 9ನೇ ತರಗತಿಯ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5.15 ರವರೆಗೆ ನಡೆಯಲಿದೆ.ಮಾ.28 ರಂದು 8ನೇ ತರಗತಿಯ ಸಮಾಜ ವಿಜ್ಞಾನ ಬೆಳಿಗ್ಗೆ 10 ರಿಂದ 12.30 ಹಾಗೂ 9ನೇ ತರಗತಿಯ ಸಮಾಜ ವಿಜ್ಞಾನ ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.

RELATED ARTICLES

Latest News