Thursday, December 12, 2024
Homeಬೆಂಗಳೂರುವಿದೇಶಿ ಡ್ರಗ್ ಪೆಡ್ಲರ್ ಬಂಧನ : 75 ಲಕ್ಷ ಮೌಲ್ಯದ ಮಾದಕ ವಸ್ತು ವಶ

ವಿದೇಶಿ ಡ್ರಗ್ ಪೆಡ್ಲರ್ ಬಂಧನ : 75 ಲಕ್ಷ ಮೌಲ್ಯದ ಮಾದಕ ವಸ್ತು ವಶ

Foreign drug peddler arrested: Narcotics worth Rs 75 lakh seized

ಬೆಂಗಳೂರು,ನ.26– ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಮೋಜಿನ ಜೀವನ ನಡೆಸುವ ಸಲುವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 77 ಲಕ್ಷ ರೂ. ಮೌಲ್ಯದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಆಫ್ರಿಕಾ ದೇಶದ ಈ ಡ್ರಗ್ಪೆಡ್ಲರ್ 2017 ರಲ್ಲಿ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ದುರುದ್ದೇಶದಿಂದ ನಗರದಲ್ಲಿ ನೆಲೆಸಿರುವ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಮಾದಕವಸ್ತು ಖರೀದಿಸಿ ಒಂದು ಗ್ರಾಂಗೆ 12 ಸಾವಿರದಿಂದ 15 ಸಾವಿರದಂತೆ ಹೆಚ್ಚಿನ ಬೆಲೆಗೆ ಐಟಿಬಿಟಿ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು.

ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಆರ್ ಕಾಲೇಜು ರಸ್ತೆ, ರೈಲ್ವೆ ಗೇಟ್ ಹತ್ತಿರ ವಿದೇಶಿ ಡ್ರಗ್ ಪೆಡ್ಲರ್ ಮಾದಕ ವಸ್ತುಗಳನ್ನು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗೆ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ವಿದೇಶಿ ಡ್ರಗ್ಪೆಡ್ಲರ್ನನ್ನು ಬಂಧಿಸಿ ಆತನ ಬಳಿಯಿದ್ದ 77 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್, ತೂಕದ ಯಂತ್ರ ಹಾಗೂ ಮೊಬೈಲ್ ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಈತನ ಮೇಲೆ ಈಗಾಗಲೇ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News