ವಿದೇಶದಿಂದ ಬೆಂಗಳೂರಿಗೆ ಬಂದ 7 ಪ್ರಯಾಣಿಕರಿಗೆ ಕೊರೋನಾ

Social Share

ಬೆಂಗಳೂರು,ಫೆ.2- ವಿವಿಧ ದೇಶಗಳಿಂದ ನಗರಕ್ಕೆ ಆಗಮಿಸಿದ ಏಳು ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ 7 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಅಕೃತ ಮೂಲಗಳು ತಿಳಿಸಿವೆ.
ಲಂಡನ್, ಫ್ರಾನ್ಸ್ ï ಮೂಲದ ತಲಾ ಇಬ್ಬರು, ಯುಎಸ್, ದಕ್ಷಿಣ ಆಫ್ರಿಕಾ, ಹಾಗೂ ಸ್ವೀಡನ್ ಮೂಲದ ತಲಾ ಒಬ್ಬರು ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಸೋಂಕಿತರನ್ನು ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ತಗ್ಗಿದೆ. ಆದರೆ, ವಿದೇಶದಿಂದ ಬರುವ ಪ್ರಯಾಣಿಕರ ಪೈಕಿ ಕೆಲವರಲ್ಲಿ ನಿತ್ಯವೂ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

Articles You Might Like

Share This Article