ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ದಾಳಿ

Social Share

ಬೆಂಗಳೂರು, ಅ.15- ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಹಾಗೂ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಮನೆಯೊಂದರಲ್ಲಿ ಉಗಾಂಡಾ ದೇಶದ ಮೂವರು ಯುವತಿಯರು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಅಲ್ಲದೆ, ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯ ಓರಾಯನ್ ಮಾಲ್ 3ನೆ ಮಹಡಿಯ ಸೇನ್ಸ್ ಸ್ಪಾದಲ್ಲಿ ನಾಲ್ವರು ಥೈಲ್ಯಾಂಡ್ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿತರನ್ನು ವಶಕ್ಕೆ ಪಡೆದು ಆರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಸೂಕ್ತ ಕ್ರಮಕ್ಕಾಗಿ ಬಾಣಸವಾಡಿ ಮತ್ತು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗಳಿಗೆ ವಿದೇಶಿ ಮಹಿಳೆಯರನ್ನು ಹಾಜರುಪಡಿಸಿದ್ದು, ಅವರು ಪಾಸ್ಪೆಫೋರ್ಟ್ ಮತ್ತು ವೀಸಾ ಹೊಂದಿರದ ಸಲುವಾಗಿ ಮುಂದಿನ ಕ್ರಮಕ್ಕಾಗಿ ಎಫ್ಆರ್ಆರ್ಒ ರವರಿಗೆ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ.

ಆರೋಪಿತರ ವಿರುದ್ಧ ಬಾಣಸವಾಡಿ ಮತ್ತು ಸುಬ್ರಹ್ಮನ್ಯನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತವೆ.

Articles You Might Like

Share This Article