Friday, July 19, 2024
Homeರಾಜ್ಯಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು,ಅ.12- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬಿಜೆಪಿಯ ಮಾಜಿ ಶಾಸಕ ಶಿರಹಟ್ಟಿ ಕ್ಷೇತ್ರದ ರಾಮಪ್ಪ ಲಮಾಣಿ ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಬಿ.ಎನ್.ಚಂದ್ರಪ್ಪ, ಗದಗ್‍ನ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್.ಪಾಟೀಲ್, ಶಾಸಕರಾದ ವಿನಯ್ ಕುಲಕರ್ಣಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಿದೆ. ಐದು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಎಲ್ಲರೂ ಹೇಳುತ್ತಿದ್ದರೂ, ನಿರೀಕ್ಷೆ ಮೀರಿ ಸರ್ಕಾರ ಭರವಸೆಗಳನ್ನು ಈಡೇರಿಸಿದೆ. ಇದು ರಾಷ್ಟ್ರಕ್ಕೆ ಮಾದರಿ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಭರವಸೆಗಳಂತಹ ಕಾರ್ಯಕ್ರಮಗಳ ಜಾರಿಗೆ ಒತ್ತಡ ಹೆಚ್ಚಿದೆ. ಜೊತೆಯಲ್ಲಿ ಕಾಂಗ್ರೆಸ್ ಮೇಲೆ ಭರವಸೆ ಹೆಚ್ಚುತ್ತಿದೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು

ದೇಶದಲ್ಲಿ ರಾಜಕೀಯ ದ್ರುವೀಕರಣವಾಗುತ್ತಿದೆ. ಸದ್ಯಕ್ಕೆ ಘೋಷಣೆಯಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಸೆಮಿಫೈನಲ್ ಆಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ ಎಂದರು.

ರಾಮಣ್ಣ ಲಮಾಣಿ ಬಿಜೆಪಿಯಿಂದ ಎರಡು ಬಾರಿ ಎಂಎಲ್‍ಎ ಆಗಿದ್ದರು, ಒಮ್ಮೆ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು. ಇದೇ ವೇಳೆ ರಾಮಣ್ಣ ಲಮಾಣಿ ಮಾತನಾಡಿ, ಬಿಜೆಪಿ ಅಧೋಗತಿಗೆ ಹೋಗುತ್ತಿದೆ. ಅಲ್ಲಿ ಹೆಚ್ಚು ಅನುಭವಸ್ಥರು ಇಲ್ಲ, ರಾಜ್ಯಾದ್ಯಂತ 15 ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಇದೇ 20 ರಂದು ಮತ್ತಷ್ಟು ಮಂದಿ ಕಾಂಗ್ರೆಸ್‍ಗೆ ಬರಲಿದ್ದಾರೆ ಎಂದರು.

RELATED ARTICLES

Latest News