ಬೆಂಗಳೂರು,ಸೆ.25- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದು ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಣಿಪಾಲ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ, ಡಾ ಸುನೀಲ್ ಕಾರಂತ್ ಅವರ ತಂಡ ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಸಕ್ರಿಯ ರಾಜಕಾರಣದಿಂದ ರಾಜಕೀಯದಿಂದ ದೂರವಾಗಿದ್ದ ಎಸ್.ಎಂ.ಕೃಷ್ಣ ಅವರು ವಿಶ್ರಾಂತಿಯಲ್ಲಿದ್ದರು.