Thursday, December 26, 2024
Homeರಾಷ್ಟ್ರೀಯ | National'ಒಂದು ದೇಶ - ಒಂದು ಚುನಾವಣೆ' ಪ್ರಗತಿಗೆ ಪೂರಕವಾಗಿದೆ : ಬೊಮ್ಮಾಯಿ

‘ಒಂದು ದೇಶ – ಒಂದು ಚುನಾವಣೆ’ ಪ್ರಗತಿಗೆ ಪೂರಕವಾಗಿದೆ : ಬೊಮ್ಮಾಯಿ

Former Karnataka CM Basavaraj Bommai Hails One Nation, One Election

ನವದೆಹಲಿ,ಡಿ.13- ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ದೆ ಎಮದರು.

ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ ಎಂದು ಹೇಳಿದರು.ಈ ದೇಶದಲ್ಲಿ ಸಹಕಾರಿ ವ್ಯಾವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ರು. ನಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತಕ ಪರಿಣಾಮ ಬೀರುತ್ತದೆ ಎಮದು ವಿಶ್ವಾಸ ವ್ಯಕ್ಕತಪಡಿಸಿದರು.

ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆಎಂದು ಕಿಡಿಕಾರಿದರು.

ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

RELATED ARTICLES

Latest News