Wednesday, December 18, 2024
Homeರಾಜ್ಯBREAKING : ಮಾಜಿ ಸಿಎಂ ಎಸ್.ಎಂ.ಕೃಷ್ಣ ಇನ್ನಿಲ್ಲ..!

BREAKING : ಮಾಜಿ ಸಿಎಂ ಎಸ್.ಎಂ.ಕೃಷ್ಣ ಇನ್ನಿಲ್ಲ..!

Former Karnataka CM SM Krishna passes away at 92

ಬೆಂಗಳೂರು, ಡಿ.10: ವಿಶ್ವದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಭದ್ರಬುನಾದಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕ್ರತ, ಮಾಜಿ ರಾಜ್ಯಪಾಲ , ಕೇಂದ್ರದ ಮಾಜಿ ವಿಧೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ( 92) ಆವರು ತೀವ್ರ ಆನಾರೋಗ್ಯದ ಹಿನ್ನಲೆಯಲ್ಲಿ ಮಂಗಳವಾರ ಮುಂಜಾನೆ ನಿದನರಾಗಿದ್ದಾರೆ.

ಮೃತರು ಪತ್ನಿ ಪ್ರೇಮಾ ಕೃಷ್ಣ, ಪುತ್ರಿಯರಾದ ಶಾಂಭವಿ, ಮಾಳವಿಕ ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರನ್ನು ಬಿಟ್ಟು ಆಗಲಿದ್ದಾರೆ. ಮೃತರ ಗೌರವರ್ಥವಾಗಿ ರಾಜ್ಯ ಸರ್ಕಾರ ಮೂರು ದಿನಗಳ ಶೋರಚಾರಣೆಯನ್ನು ಘೋಷಣೆ ಮಾಡಿದೆ.ಮೃತರ ಅಂತ್ಯಕ್ರಿಯೆ ಬುಧವಾರ ಹುಟ್ಟರಾದ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಾಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಎಸ್. ಎಂ ಕೃಷ್ಣ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗಧೀಶ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ. ಹೆಚ್.ಡಿ ಕುಮಾರಸ್ವಾಮಿ , ಬಸವರಾಜ್ ಬೊಮ್ಮಯಿ, ಡಿ.ವಿ ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸದಾಶಿವನಗರದಲ್ಲಿರುವ ಶಾಂಭಾವಿ ನಿವಾಸದಲ್ಲಿ ಇಂದು ದಿನಪೂರ್ತಿ ಸಾರ್ವಜನಿಕರ ಧರ್ಶನಕ್ಕೆ ವ್ಯಸವ್ಥೆ ಮಾಡಲಾಗಿದ್ದು, ಬುಧವಾರ ಬೆಳಗ್ಗೆ ಹುಟ್ಟೂರಿಗೆ ಕೃಷ್ಣ ಅವರ ಪಾರ್ಥಿಬ ಶರೀರವನ್ನು ಕೊಂಡುಯ್ಯಲಾಗುತ್ತದೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು.ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ಕರೆ ತರಲಾಗಿತ್ತು. ಆದರೆ ಅನಾರೋಗ್ಯ ಕಾಡಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಒಂದು ತಿಂಗಳಿನಿಂದ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಯವಾಗಿತ್ತು.ಇದರಿಂದ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು.

ಆರೂವರೆ ದಶಕಕ್ಕೂ ಹೆಚ್ಚು ಕಾಲ ರಾಜಕಾರಣದಲ್ಲಿದ್ದ ಎಸ್.ಎಂ.ಕೃಷ್ಣ ಅವರು ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಲ್ಲೇಖಿಸಿ 7 ಜನವರಿ 2023 ರಂದು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.
ಕೆಲವು ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥರಾಗಿದ್ದ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾದ ಸುಮಾರು ಎರಡು ತಿಂಗಳ ನಂತರ ಎಸ್‌ಎಂ ಕೃಷ್ಣ ಅವರನ್ನು 2024ರ ಅಕ್ಟೋಬರ್ 19ರಂದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಮನೆಗೆ ಕರೆ ತರಲಾಗಿತ್ತು. ಸೋಮವಾರ ರಾತ್ರಿಯಿಂದಲೇ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿ ಕೊನೆಯುಸಿರೆಳೆದಿದ್ದಾರೆ..

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ 1932 ಮೇ 1 ರಂದು ಜನಿಸಿದರು. ಹುಟ್ಟುತ್ತಲೇ ಕೃಷ್ಣ ಅವರು ಆಗರ್ಭ ಶ್ರೀಮಂತರು. ಅವರ ತಂದೆ ಮಲ್ಲಯ್ಯ ಅವರು ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. 40 ವರ್ಷಕ್ಕೂ ಅಧಿಕ ಕಾಲ ಪ್ರಜಾಪ್ರತಿನಿಧಿ ಸಭೆ ಹಾಗೂ ನ್ಯಾಯವಿಧಾಯಕ ಸಭೆಯ ಸದಸ್ಯರಾಗಿ, ಮಂಡ್ಯ ಜಿಲ್ಲಾ ಬೋರ್ಡಿನ ಅಧ್ಯಕ್ಷರಾಗಿ, ಮೈಸೂರು ವಿವಿ ಸೆನೆಟ್ ಸದಸ್ಯರಾಗಿ, ರಾಜ್ಯ ಆರ್ಥಿಕ ಸುಧಾರಣ ಸಮಿತಿ ಸದಸ್ಯರಾಗಿ, ರಾಷ್ಟ್ರ ಹಾಗೂ ರಾಜ್ಯ ಒಕ್ಕಲಿಗ ಸಂಘದ ಮಹಾಕಾರ್ಯದರ್ಶಿಯಾಗಿ ಮಲ್ಲಯ್ಯ ಅವರು ಸೇವೆ ಸಲ್ಲಿಸಿದ್ದರೆ.

ಕೃಷ್ಣ ಅವರ ತಂದೆ ತಾಯಿಗೆ ಒಟ್ಟು 10 ಮಂದಿ ಮಕ್ಕಳು. ಕೃಷ್ಣ ಅವರು 6 ನೇ ಮಗ. ಇವರ ಹಿಂದೆ ಐದು ಮಂದಿ ಹೆಣ್ಣು ಮಕ್ಕಳು ಹಾಗೂ ಇವರ ಬಳಿಕ ಒಂದು ಗಂಡು ಹಾಗೂ ಮೂರು ಮಂದಿ ಹೆಣ್ಣು ಮಕ್ಕಳು ಜನಿಸಿದ್ದರು. ಕೃಷ್ಣ ಅವರು ಜನನಕ್ಕೂ ಮುನ್ನ ಎರಡು ಗಂಡು ಮಕ್ಕಳು ಸಾವನ್ನಪ್ಪಿದ್ದರು. ಬಳಿಕ ಕೃಷ್ಣ ಅವರ ತಂದೆ ತಾಯಿ ಮಲೆಮಹದೇಶ್ವರನಿಗೆ ಹರಕೆ ಹೊತ್ತ ಫಲವಾಗಿ ಎಸ್.ಎಂ.ಕೃಷ್ಣ ಅವರ ಜನನವಾಗಿ ಆರೋಗ್ಯವಾಗಿ ಬೆಳೆದು ನಿಂತರು. 1934 ರಂದು ಮಹಾತ್ಮ ಗಾಂಧೀಜಿ ಅವರು ಸೋಮನಹಳ್ಳಿಗೆ ಬಂದ ವೇಳೆ ಮೂರು ವರ್ಷದ ಪುಟ್ಟ ಕೃಷ್ಣ ಅವರು ಗಾಂಧೀಜಿ ಅವರಿಗೆ ಹೂವಿನ ಮಾಲೆ ಹಾಕಿದ್ದರು.

1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಎಸ್.ಎಂ.ಕೃಷ್ಣ ಅವರು ಮುನ್ನೆಡಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.ಈ ವೇಳೆ ಮದ್ದೂರು ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮೊದಲ ನಾಯಕ ಸಿಎಂ ಆಗಿರುವ ಹೆಗ್ಗಳಿಕೆಗೆ ಕೃಷ್ಣ ಅವರು ಪಾತ್ರರಾಗಿದ್ದರು.

ತಮ್ಮ ಶಿಸ್ತು ಬದ್ದ ಜೀವನದ ಮೂಲಕವೇ ಗಮನ ಸೆಳೆದಿದ್ದ ಕೃಷ್ಣ ಅವರು ಸದಾ ನಗುಮುಖದ ಮೂಲಕ ತಮ್ಮದೇ ಆದ ಶೈಲಿಯ ರಾಜಕಾರಣದ ಮೂಲಕ ಗಮನ ಸೆಳೆದಿದ್ದ ಎಸ್.ಎಂ.ಕೃಷ್ಣ ಅವರು ಶಾಸಕ,ಸಂಸದ. ್ಲ ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ, ಕೇಂದ್ರದಲ್ಲಿ ಸಚಿವ, ಮಹಾರಾಷ್ಟ್ರ ರಾಜ್ಯಪಾಲರೂ ಆಗಿದ್ದವರು. ರ‍್ಣಮಯ ವ್ಯಕ್ತಿತ್ವದ ರಾಜಕಾರಣಿ. ಎಸ್.ಎಂ. ಕೃಷ್ಣ ಅವರ ಜೀವನಗಾಥೆ “ನೆಲದ ಸಿರಿ” ಪುಸ್ತಕ ಬಿಡುಗಡೆಯಾಗಿತ್ತು.

ಎಸ್.ಎಂ.ಕೃಷ್ಣ ಅವರ ಜೀವನಚರಿತ್ರೆ ‘ಚಿತ್ರ ದೀಪ ಸಾಲು’, ನೆನಪುಗಳ ಸಂಕಲನ ‘ಸ್ಮೃತಿವಾಹಿನಿ’, ಜೀವನಚರಿತ್ರೆ ‘ಕೃಷ್ಣಪಥ’, ಚಿಂತನೆಗಳ ಸಂಕಲನ ‘ಭವಿಷ್ರ‍್ಶನ’, ಇಂಗ್ಲಿಷ್ ಕೃತಿಗಳಾದ ‘ಡೌನ್ ಮೆಮೊರಿ ಲೇನ್’ ಹಾಗೂ ‘ಸ್ಟೇಟ್ಸ್ಮನ್ ಎಸ್‌ಎಂ ಕೃಷ್ಣ’ ಕೃತಿಗಳು ನಾಲ್ಕು ರ‍್ಷದ ಹಿಂದೆ ಬಿಡುಗಡೆ ಕಂಡಿದ್ದವು. ಮದ್ದೂರು ಕ್ಷೇತ್ರದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಎಸ್.ಎಂ.ಕೃಷ್ಣ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ಅನುಭವಿಸಿದವರು. ರ‍್ನಾಟಕದ ಮುಖ್ಯಮಂತ್ರಿಯಾಗಿ ಬೆಂಗಳೂರಿನ ಅಭಿವೃದ್ದಿಗೂ ಕೊಡುಗೆ ನೀಡಿದ್ದವರು. ಕೇಂದ್ರದಲ್ಲೂ ಕೈಗಾರಿಕಾ ಸಚಿವ, ವಿದೇಶಾಂಗ ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದವರು. ಬಹುತೇಕ ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್‌ನಲ್ಲಿಯೇ ಕಳೆದ ಕೃಷ್ಣ ಅವರು ಹಿಂದೆ ಬಿಜೆಪಿಗೆ ಸೇರಿದ್ದರು. ಅಲ್ಲಿಯೇ ಇದ್ದರು.

ಇಷ್ಟೇಲ್ಲಾ ಸಮಸ್ಯೆಗಳ ನಡುವೆ ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳು ಇಂದಿಗೂ ಸ್ಮರಿಸಬೇಕಾಗಿದೆ.


ಮೂರು ದಿನಗಳ ಕಾಲ ಶೋಕಾಚರಣೆ :
ಮಾಜಿ ಸಿಎಂ ಎಸ್‌‍.ಎಂ.ಕೃಷ್ಣ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಜ್ಯಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.ದಿವಂಗತರ ಅಂತ್ಯಕ್ರಿಯೆಯನ್ನು ನಾಳೆ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ ಡಿ.12 ರವರೆಗೆ ಮೂರು ದಿನಗಳ ಕಾಲ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES

Latest News