Saturday, July 20, 2024
Homeರಾಜ್ಯವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಹೃದಯಾಘಾತದಿಂದ ನಿಧನ

ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಹೃದಯಾಘಾತದಿಂದ ನಿಧನ

ಬೆಂಗಳೂರು, ಜೂ.17-ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ ಅಣುಕು ಶವ ನಡೆಸುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರು ಕುಸಿದುಬಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.ಆರ್‌ಎಸ್‌‍ಎಸ್‌‍ ಹಿನ್ನಲೆಯಲ್ಲಿ ಭಾನುಪ್ರಕಾಶ್‌ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮ ಹಾಕಿದ್ದರು. ಒಂದು ಬಾರಿ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಸಂತಾಪ: ಭಾನುಪ್ರಕಾಶ್‌ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಅನೇಕರು ತೀವ್ರ ಕಂಬನಿ ಮಿಡಿದಿದ್ದಾರೆ.

RELATED ARTICLES

Latest News