ಮಂಗಳೂರು,ಅ.6– ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಮುಮ್ತಾಜ್ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ನಾನು ಸಾಯುತ್ತಿದ್ದೇನೆ ಎಂದು ಕುಟುಂಬಸ್ಥರಿಗೆ ಹೇಳಿ ಮನೆಯಿಂದ ಮಮ್ತಾಜ್ ತೆರಳಿದ್ದರು ಎನ್ನಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ತಂಡದವರು ಹಾಗೂ ನಮ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಡಿಸಿಪಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕದಳದವರು ಹುಡುಕಾಟ ನಡೆಸಿದ್ದಾರೆ.
ನಾಪತ್ತೆಯಾಗಿರುವ ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಕಮಿಷನರ್ ಎದುರು ಮೊಯಿದ್ದೀನ್ ಬಾವ ಕಣ್ಣೀರು ಹಾಕಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರ್ ಚಲಾಯಿಸಿ ಬಂದಿದ್ದರು. ಕುಳೂರು ಸೇತುವೆ ಯಲ್ಲಿ ಕಾರು ಅಪಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಎಫ್‌ಎಸ್‌ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿದೆ, ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.