ಬೆಂಗಳೂರು, ಮಾ.11- ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು ಎಂದು ಸ್ಮರಿಸಿದರು.
ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ ಅಭಿವೃದ್ಧಿ, ಪರಿಶಿಷ್ಟ ಜನಾಂಗದ ಬಗ್ಗೆ ಹಾಗೂ ಚಾಮರಾಜನಗರದ ಬಗ್ಗೆ ಅಪಾರ ಕಳಕಳಿ ಹೊಂದಿದ್ದು. ಅವರಿಗಾಗಿ ಒಳ್ಳೆ ಕೆಲಸ ಮಾಡಿದ್ದರು. ಅವರು ಹೃದಯಾಘಾತವಾಗಿ ನಿಧಾನರಾಗಿರುವುದು ಆಘಾತ ತಂದಿದೆ. ನಂಬಲಾಗುತ್ತಿಲ್ಲ. ಅತಿ ಕ್ರಿಯಾಶೀಲರಾಗಿ ಓಡಾಡುತ್ತಿದ್ದರು ಎಂದರು.
ಜಪಾನ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದವರ ಬಂಧನ
ಸಂಸತ್ತಿನಲ್ಲಿ ಅವರು ಪರಿಣಾಮಕಾರಿಯಾಗಿ ಮಾತನಾಡುತ್ತಿದ್ದರು ಪರಿಶಿಷ್ಟ ಜನಾಂಗ, ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ಬದ್ಧತೆಯುಳ್ಳ ಒಬ್ಬ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಇದು ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಶೋಕ ವ್ಯಕ್ತಪಡಿಸಿದರು.
ಜೈಲಿಗೆ ಹಾಕಬಹುದು ನನ್ನ ಉತ್ಸಾಹ ಕುಂದಿಸಲು ನಿಮ್ಮಿಂದ ಸಾಧ್ಯವಿಲ್ಲ : ಮನೀಶ್ ಸಿಸೋಡಿಯಾ
ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
Former, MP Dhrivanarayan, state, honors, CM Bommai,