Tuesday, August 5, 2025
Homeರಾಜ್ಯBIG BREAKING : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ..!

BIG BREAKING : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ..!

Former MP Prajwal Revanna sentenced to life imprisonment in rape case

ಬೆಂಗಳೂರು, ಜು.2- ಮನೆಗೆಲಸದಾಕೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.ವಿಶೇಷನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಗಜಾನನ ಭಟ್ ಅವರು, ಪ್ರಜ್ವಲ್‌ಗೆ ಹತ್ತು ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ.

ಕೆ.ಆ‌ರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ನಿನ್ನೆ ತೀರ್ಪು ನೀಡಿದ್ದರು. ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದ್ದಾರೆ.ಇದುವರೆಗಿನ ನ್ಯಾಯಾಂಗ ಬಂಧನದ ಸೆರೆವಾಸದ ಅವಧಿಯು ವಿಧಿಸಿರುವ ಶಿಕ್ಷೆಯಲ್ಲಿ ಕಡಿತವಾಗುವುದಿಲ್ಲ.

ಸೆರೆವಾಸದ ಶಿಕ್ಷೆಯು ಇಂದಿನಿಂದ ಆರಂಭಗೊಳ್ಳಲಿದೆ. ಸಂತ್ರಸ್ತೆಗೂ ಪರಿಹಾರ ನೀಡಬೇಕು ಎಂದು ತೀರ್ಪು ನೀಡಿದ್ದಾರೆ.ನ್ಯಾಯಾಲಯದಲ್ಲಿ ಕಣ್ಣೀರು ಸುರಿಸಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಪ್ರಜ್ವಲ್ ರೇವಣ್ಣ ಮನವಿ ಮಾಡಿಕೊಂಡಿದ್ದರು.

ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಕೇಸ್​​ನಲ್ಲಿ ಪ್ರಜ್ವಲ್ ರೇವಣ್ಣಗೆ IPC 376(2)K ಅಡಿ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನ​ ನ್ಯಾ.ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ದಾರೆ. ಹಾಗೆಯೇ ಸಂತ್ರಸ್ತೆ ಮಹಿಳೆಗೆ 11 ಲಕ್ಷ ಪರಿಹಾರ ಅಪರಾಧಿ ನೀಡಬೇಕೆಂದು ಕೋರ್ಟ್​ ಘೋಷಿಸಿದೆ.

ಇಂದು ಸರ್ಕಾರದ ಪರ ವಕೀಲರಾದ ಬಿ.ಎನ್ ಜಗದೀಶ್, ಅಶೋಕ್ ನಾಯಕ್ ಪ್ರಬಲ ವಾದ ಮಂಡನೆ ಮಾಡಿದ್ದು, ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಪರ ವಕೀಲೆ ನಳಿನಿ ಮಾಯಾಗೌಡ ವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇದೀಗ ಅಂತಿಮವಾಗಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

RELATED ARTICLES

Latest News