ಮಾಜಿ ಪ್ರಧಾನಿ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲು

Social Share

ಬೆಂಗಳೂರು,ಮಾ.1- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಲು ನೋವು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆಗಾಗಿ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಗೌಡರು ಟ್ವೀಟ್ ಮೂಲಕ ತಿಳಿಸಿದ್ದಾರೆ. ದೇವೇಗೌಡರು ಆರಾಮಾಗಿದ್ದು, ಊಟ ತಿಂಡಿ ಮಾಡಿಕೊಂಡು ಚೆನ್ನಾಗಿದ್ದಾರೆ.

ಇಂದಿನಿಂದ 4 ದಿನ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಯಾವುದೇ ತುರ್ತು ಚಿಕಿತ್ಸೆ ಅಗತ್ಯವಿಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ಕಾಲು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನಲೆಯಲ್ಲಿ ಥೆರಪಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳು ಒಂದೆಡೆ ದೊರೆಯುವ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಹೇಳಿದ್ದಾರೆ.

#FormerPrimeMinister, #DeveGowda, #Admitted, #PrivateHospital,

Articles You Might Like

Share This Article