Monday, November 24, 2025
Homeರಾಜಕೀಯ | Politicsಎನ್‍ಡಿಎ ಅಭ್ಯರ್ಥಿಗಳ ಪರ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ

ಎನ್‍ಡಿಎ ಅಭ್ಯರ್ಥಿಗಳ ಪರ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ

ಬೆಂಗಳೂರು,ಏ.23-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ನಿರಂತರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್‍ರ ಪರವಾಗಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಸಂಜೆ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮರಳವಾಡಿಯಲ್ಲಿ ಬೆಳಿಗ್ಗೆ , ಮಧ್ಯಾಹ್ನ ಹಾರೋಹಳ್ಳಿ ಬಿಡದಿ ಮತ್ತು ಕೂಟಗಲ್ಲುವಿನಲ್ಲಿ ಮಂಜುನಾಥ್ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ಸಂಜೆ ಕುಣಿಗಲ್ ಕ್ಷೇತ್ರದ ಹುತ್ತರಿದುರ್ಗ, ಹುಲಿಯೂರು ದುರ್ಗ ಹಾಗೂ ಅಮೃತೂರಿನಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ದೇವೇಗೌಡರು ಭಾಗವಹಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಇಂದು ಬೆಳಿಗ್ಗೆ ಮೈಸೂರು ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತ ಯಾಚಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಕುಮಾರಸ್ವಾಮಿ ಮಧ್ಯಾಹ್ನ ಮಳವಳ್ಳಿಯಲ್ಲಿ ರೋಡ್ ಶೋ ಹಾಗೂ ಚುನಾವಣಾ ಪ್ರಚಾರ ಸಭೆಯನ್ನು ನಡೆಸಿದರು. ಸಂಜೆ ಮದ್ದೂರಿನಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಲಿದ್ದಾರೆ.

RELATED ARTICLES
- Advertisment -

Latest News