ಬೆಂಗಳೂರು, ಅ.31– ಸ್ವಾತಂತ್ರ್ಯದ ನಂತರ ಭಾರತವನ್ನು ಒಟ್ಟುಗೂಡಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತೋರಿಸಿದ ಕೌಶಲ್ಯ ಮತ್ತು ದೃಢಸಂಕಲ್ಪವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ ದಿನಾಚರಣೆಯಾದ ಇಂದು ನನ್ನ ಗೌರವಗಳನ್ನು ಸಲ್ಲಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅವರ ಪಾತ್ರ ಮತ್ತು ತ್ಯಾಗವು ಅವರನ್ನು ನಮ ರಾಷ್ಟ್ರದ ಶ್ರೇಷ್ಠ ಪುತ್ರರಲ್ಲಿ ಒಬ್ಬರನ್ನಾಗಿ ಮಾಡಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.
- Advertisement -

